CRIMENEWSನಮ್ಮಜಿಲ್ಲೆ

KKRTC ಬಸ್‌ – ಟಿಪ್ಪರ್‌ ನಡುವೆ ಭೀಕರ ಅಪಘಾತ: ಕಂಡಕ್ಟರ್‌ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಹಾಗೂ ಟಿಪ್ಪರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ) ಸಮೀಪ ನಡೆದಿದೆ.

ಮಂಗಳವಾರ ರಾತ್ರಿ 10 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಈ ದುರಂತದಲ್ಲಿ ಕೆಕೆಆರ್‌ಟಿಸಿ ಕೊಪ್ಪಳ ವಿಭಾಗದ ಕುಕನೂರು ಘಟಕದ ನಿರ್ವಾಹಕ ಉಮೇಶ್ ಬಟಪ್ನಳ್ಳಿ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬಸ್‌ ಕುಕನೂರು – ಬೆಂಗಳೂರು ಮಾರ್ಗವಾಗಿ ಚಲಿಸುವಾಗ ಈ ಅವಘಡ ಸಂಭವಿಸಿದೆ.

ಅಪಘಾತದ ವಿxಯ ತಿಳಿದ ಕೂಡಲೇ KKRTC ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ, ಡಿಎಂಇ, ಡಿಟಿಒ ಹಾಗೂ ಡಿಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!