CRIMENEWSನಮ್ಮಜಿಲ್ಲೆ

KSRTC ಬಸ್‌ ಟ್ರಕ್ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಮಂದಿಗೆ ಗಾಯ, ಚಾಲಕ ಸೇರಿ ನಾಲ್ವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಾಲಕ ಸೇರಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಾಗರ ತಾಲೂಕು ಆನಂದಪುರದ ಬಳಿ ನಡೆದಿದೆ.

ಇಂದು ಬೆಳಗ್ಗೆ ಸಂಭವಿಸಿರುವ ಈ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವತು ಗಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಈ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಕೆಎಸ್​ಆರ್​ಟಿಸಿ ಬಸ್​ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಇತ್ತ ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಶಾಲಾ ವಾಹನದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಈ ಘಟನೆ ನಡೆದಿದೆ. ಸುಮಾರು 50 ಜನ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್‌ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಟ್ರಕ್‌ ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ವೇಗವಾಗಿ ಬರ್ತಿದ್ದ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ KSRTC ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ.

ಅಪಘಾತವು ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ದಾವಿಸಿದ್ದು, ಸಾಗರದ ಮರ್ಕಜ್‌ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.

ಕೆಎಸ್​ಆರ್​ಟಿಸಿ ಹಾಗೂ ಟ್ರಕ್​ ನಡುವೆ ಸಂಭವಿಸಿದ ಅಪಘಾತದ ಬಳಿಕ ಮುಂಬಾಳು ಬಳಿ ರಸ್ತೆ ಸಂಚಾರ ಸಂಪೂರ್ಣವಾಗಿ ಬಂದ್ ಆಗಿತ್ತು. ಕೆಲ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Megha
the authorMegha

Leave a Reply

error: Content is protected !!