CrimeNEWS

ಬೈಕ್‌ಗಳ ನಡುವೆ ಅಪಘಾತ: ತಂದೆ, ನಾಲ್ಕು ವರ್ಷದ ಮಗು ಸಾವು, ತಾಯಿ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಎರಡು ಬೈಕ್​ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ 4 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಪ್ಲೈಓವರ್ ಮೇಲೆ ನಡೆದಿದೆ.

ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ