Vijayapatha - ವಿಜಯಪಥ > Blog > NEWS > Crime > ಬೈಕ್‌ಗಳ ನಡುವೆ ಅಪಘಾತ: ತಂದೆ, ನಾಲ್ಕು ವರ್ಷದ ಮಗು ಸಾವು, ತಾಯಿ ಸ್ಥಿತಿ ಗಂಭೀರ
ಬೆಂಗಳೂರು: ಬೆಳ್ಳಂಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ 4 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಪ್ಲೈಓವರ್ ಮೇಲೆ ನಡೆದಿದೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related
Deva
Leave a reply