CrimeNEWSನಮ್ಮಜಿಲ್ಲೆ

ಹಠ ಮಾಡುತ್ತವೆ ಎಂದು ಉಸಿರುಗಟ್ಟಿಸಿ ಅವಳಿ ಮಕ್ಕಳ ಕೊಂದ ಪಾಪಿ ತಂದೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಂದಿರುವ ಘಟನೆ ರಾಣೆಬೆನ್ನೂರಿನ ಚಳಗೇರಿ ಟೋಲ್ ಸರ್ವೀಸ್ ರೋಡ್ ಬಳಿ ನಡೆದಿದೆ.

ಅದ್ವೈತ್ (4) ಹಾಗೂ ಅನ್ವೀತ್ (4) ಹತ್ಯೆಯಾದ ಕಂದಮ್ಮಗಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ. ಮೂಲತಃ ಗೋಕಾಕ ನಿವಾಸಿಯಾಗಿರುವ ಈತ ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದಾನೆ.

ಈತ ಹರಿಹರದ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಇವನ ಪತ್ನಿ ಜಯಲಕ್ಷ್ಮೀ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನು ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ ಎಂದು ತಿಳಿದು ಬಂದಿದೆ.

ಈ ನಡುವೆ ಏನು ತಿಳಿಯದ ಮಕ್ಕಳು ಹೆಚ್ಚು ಹಠ ಮಾಡುವುದು ಸಹಜ. ಆ ಮಕ್ಕಳು ಹಠ ಮಾಡುತ್ತೇವೆ ಎಂದು ತನ್ನ ಕಾರಿನಲ್ಲಿ ರಾಣೇಬೆನ್ನೂರು ತಾಲೂಕು ಚಳಗೇರಿ ಟೋಲ್ ಹತ್ತಿರ ಕರೆದುಕೊಂಡು ಹೋಗಿ ಸರ್ವೀಸ್ ರಸ್ತೆಯಲ್ಲಿ ಮಕ್ಕಳ ಬಾಯಿ ಮತ್ತು ಮೂಗಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಪಾಪಿ.

ಆರೋಪಿ ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಆತನ ಮೊಬೈಲ್ ಲೊಕೇಶನ್ ಆಧಾರದ ಮೇಲೆ ಪತ್ತೆ ಮಾಡಿದ್ದು, ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ