CRIMENEWSನಮ್ಮಜಿಲ್ಲೆ

NWKRTC ಬಸ್‌-ಲಾರಿ ನಡುವೆ ಭೀಕರ ಡಿಕ್ಕಿ: ಇಬ್ಬರೂ ಚಾಲಕರಿಗೂ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಬ್ಬೂರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರೂ ಚಾಲಕರು ಸೇರಿದಂತೆ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿರುವ ಘಟನೆ ಕಬ್ಬೂರ ಪಟ್ಟಣದ ನಿಪ್ಪಾಣಿ-ಮುಧೋಳ ರಸ್ತೆಯ ಚಿಕ್ಕೋಡಿ ಉಪಕಾಲುವೆ ಬಳಿ ನಡೆದಿದೆ.

ಈ ಭೀಕರ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬಸ್‌ ಹಾಗೂ ಲಾರಿಯ ಮುಂಭಾಗಳು ನಜ್ಜುಗುಜ್ಜಾಗಿವೆ. ಅಪಘಾತದಿಂದ ಲಾರಿ ಒಳಗಡೆ ಸಿಲುಕಿದ ಚಾಲಕನನ್ನು ಹೊರ ತೆಗೆಯಲು ಸ್ಥಳೀಯರು ಪರದಾಡಿದರು.

ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆ ಎಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರೀಶಿಲಿಸಿದರು. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!