CrimeNEWSನಮ್ಮಜಿಲ್ಲೆ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಯಲ್ಲಿ ಮುಸಲ್ಮಾನ ಮಹಿಳೆಯರಿಗೆ ಅಗೌರವ ಉಂಟು ಮಾಡುವ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಅಲ್ಪಸಂಖ್ಯಾತರ ಘಟಕದ ಮುಖಂಡ ಉಸ್ಮಾನ್ ನರಸಿಂಹಯ್ಯ ಆಗ್ರಹಿಸಿದರು.

ನಗರದ ಶೇಷಾದ್ರಿ ಪುರಂ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ಬಳಿಕ ಮಾತನಾಡಿದ ಉಸ್ಮಾನ್ ನರಸಿಂಹಯ್ಯ, ಸೀತೆಯನ್ನು ಲಂಕೆಯಿಂದ ಕರೆತರುವಲ್ಲಿ ಸಹಾಯ ಮಾಡಿದ ಹನುಮನ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್, ಮುಸ್ಲಿಮ್ ಮಹಿಳೆಯರಿಗೆ ಮೋದಿ ಬಂದ ಮೇಲೆ ಪರ್ಮನೆಂಟ್ ಗಂಡ ಸಿಕ್ಕಿದ್ದು ಎಂಬ ಹೇಳಿಕೆ ನೀಡಿರುವುದು ಅಕ್ಷಮ್ಯ.

ಪ್ರಭಾಕರ್ ಭಟ್ ಈ ರೀತಿ ಮಾತನಾಡಿದ್ದರೂ, ಬಿಜೆಪಿ ಮುಖಂಡರು ಯಾಕೆ ಸುಮ್ಮನಿದ್ದಾರೆ, ಬಿಜೆಪಿ ಅಲ್ಪ ಸಂಖ್ಯಾತ ಘಟಕ ಸತ್ತು ಹೋಗಿದೆ, ಅವರೆಲ್ಲಾ ದುಡ್ಡಿಗಾಗಿ ಕೆಲಸ ಮಾಡುತ್ತಿರುವ ಕೂಲಿಯಾಳುಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಭಾಕರ್ ಭಟ್ ಮಹಿಳಾ ನಿಂದನೆ, ಜಾತಿ ನಿಂದನೆ, ಧರ್ಮ ನಿಂದನೆ ಮಾಡಿದ್ದು ಈ ರೀತಿ ಹೇಳಿಕೆ ನೀಡುವವರು, ದೇಶ ದ್ರೋಹಿ, ಧರ್ಮ ದ್ರೋಹಿಯಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಉಸ್ಮಾನ್ ನರಸಿಂಹಯ್ಯ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ