NEWSನಮ್ಮರಾಜ್ಯರಾಜಕೀಯ

ದೇಶದ್ರೋಹಿ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಚಂದ್ರು ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಕಾಪಿಟ್ಟುಕೊಂಡು ಬಂದಿರುವ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆಯಾಗಿದೆ. ಪದೇಪದೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್‌ ಹೆಗಡೆ ವಿರುದ್ಧ ರಾಜ್ಯ ಸರ್ಕಾರ ಸ್ವಯಂ ಪ್ರೇರಿತ ದೂರು (ಸುಮೊಟೊ) ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ಕಿದರೆ ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ. ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಅನಂತ್ ಕುಮಾರ್ ಹೇಳಿಕೆ ನೀಡಿರುವ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಇದೀಗ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಹೊತ್ತಿರುವ ರಾಜ್ಯ ಸರ್ಕಾರ ಅನಂತ ಕುಮಾರ್ ಅವರಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಗಟ್ಟಿಗುಂಡಿಗೆಯ ನಿರ್ಧಾರಗಳನ್ನು ಕೈಗೊಳ್ಳಬೇಕು. ಎಲ್ಲ ವಿಚಾರಕ್ಕೂ ಹೆದರಿಕೊಂಡು ಕುಳಿತುಕೊಳ್ಳುವುದು ತಮ್ಮ ಹುದ್ದೆಗೆ ಶೋಭೆಯಲ್ಲ ಎಂದು ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತ ಪಡಿಸಿದರು.

ಅನಂತ್‌ ಕುಮಾರ್‌ ಅವರ ಸಂವಿಧಾನ ತಿದ್ದುಪಡಿಯ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ಅದು ಕೇವಲ ಅನಂತಕುಮಾರ್‌ ಹೆಗಡೆ ಅವರ ವೈಯಕ್ತಿಕ ಹೇಳಿಕೆ ಅಲ್ಲ. ಬಿಜೆಪಿ ಮತ್ತು ಆರ್‌ಎಸ್ಎಸ್‌ನ ಮೂಲ ಉದ್ದೇಶವೇ ಸಂವಿಧಾನ ಬದಲಿಸುವುದಾಗಿದೆ. ಪ್ರಜಾಪ್ರಭುತ್ವವನ್ನು ಹದ್ದುಬಸ್ತಿನಲ್ಲಿಟ್ಟು ಸರ್ವಾಧಿಕಾರವನ್ನು ಹೇರುವುದಾಗಿದೆ.

ಉಳ್ಳವರು ಬಡವರನ್ನು ಗುಲಾಮಗಿರಿ ತಳ್ಳುವ ವ್ಯವಸ್ಥಿತ ಕುತಂತ್ರವಾಗಿದೆ. ನಮ್ಮ ದೇಶದಲ್ಲಿ ಉತ್ತರ ಕೋರಿಯಾ, ರಷ್ಯಾ, ಚೀನಾದಂತಹ ಆಡಳಿತ ಹೇರುವ ಪ್ರಯತ್ನ ನಡೆದಿದೆ. ಪ್ರಜೆಗಳು ಎಚ್ಚೆತ್ತುಕೊಳ್ಳದಿದ್ದರೆ ಮತದಾನದ ಹಕ್ಕನ್ನೇ ಕಳೆದುಕೊಳ್ಳಲಿದ್ದಾರೆ. ಒಬಿಸಿ, ಎಸ್‌ಸಿ, ಎಸ್‌ಟಿ, ದಲಿತರು, ಬುಡಕಟ್ಟು ಜನಾಂಗದವರು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡು ಆರ್‌ಎಸ್ಎಸ್‌ನವರ ಕಾಲಾಳುಗಳಾಗುತ್ತಾರೆ ಎಂದು ಎಚ್ಚರಿಸಿದರು.

ಒಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕು ಇಲ್ಲ ಎಂದಾದರೆ ಆತ ಗುಲಾಮಗಿರಿಗೆ ತಳ್ಳಲ್ಪಟ್ಟಿದ್ದಾನೆ ಎಂದರ್ಥ. ಈ ಬಾರಿಗೆ ಬಿಜೆಪಿಗೆ ಮತ ಹಾಕಿದರೆ ಶಾಶ್ವತವಾಗಿ ಮತ ಹಾಕುವ ಹಕ್ಕನ್ನು ಕಳೆದುಕೊಳ್ಳುತ್ತೀರಿ. ಈ ದೇಶದಲ್ಲಿ ಮುಂದೆ ಚುನಾವಣೆಯೇ ನಡೆಯುವುದಿಲ್ಲ. ನರೇಂದ್ರ ಮೋದಿ ಸಾಯುವವರೆಗೆ ಭಾರತವನ್ನು ಆಳಿಕೊಂಡಿರುತ್ತಾರೆ. ಜನಾಂಗೀಯ ದ್ವೇಷ ಕೆನ್ನಾಲಿಗೆಯಂತೆ ಚಾಚಿಕೊಂಡು ಹಿಂದೆಂದೂ ಕಂಡಿರದ ರಕ್ತಾಪಾತವೇ ನಡೆಯುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಕಳವಳ ವ್ಯಕ್ತಪಡಿಸಿದರು.

ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ತಳ್ಳಿ ಹಾಕುತ್ತಿರುವುದು ನ್ಯಾಯವಾದ ನಡೆಯಲ್ಲ. ಬಿಜೆಪಿಗೆ ಸಂವಿಧಾನದ ಮೇಲೆ ನಿಜಕ್ಕೂ ಗೌರವ ಇದ್ದರೆ ಅನಂತ್‌ ಕುಮಾರ್‌ ಹೆಗಡೆಗೆ ಟಿಕೆಟ್‌ ನೀಡಬಾರದು. ಆತನನ್ನು ಪಕ್ಷದಿಂದ ಶಾಶ್ವತವಾಗಿ ಉಚ್ಛಾಟನೆ ಮಾಡಬೇಕು. ಇಲ್ಲದಿದ್ದರೆ ಅನಂತ್‌ ಕುಮಾರ್‌ ಹೇಳಿಕೆಯು ಪಕ್ಷದ ಅಧಿಕೃತ ಹೇಳಿಕೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಿಡಿಕಾರಿದರು.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ