NEWSಕೃಷಿನಮ್ಮರಾಜ್ಯ

ನನಗೆ ಮದುವೆಗೆ ವಧು ಹುಡುಕಿ ಕೊಡಿ: ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರ ಬರೆದ ಮಾಜಿ ಟೆಕ್ಕಿ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ : ನನಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಹಾಗಾಗಿ ತಾವು ಹುಡುಗಿ ಕೊಡಿ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಯುವಕನೊಬ್ಬ ಪತ್ರ ಬರೆದ ವಿಚಿತ್ರ ಘಟನೆ ನಡೆದಿದೆ ಜಿಲ್ಲೆಯಲ್ಲಿ ವರದಿಯಾಗಿದೆ.

ಸಾಮಾನ್ಯವಾಗಿ ಮದುವೆಯಾಗಲು ವಧುವನ್ನು ಹುಡುಕಿ ಕೊಡುವಂತೆ ಸಂಬಂಧಿಕರು, ವಧು-ವರರ ಅನ್ವೇಷಣಾ ಕೇಂದ್ರ ಅಥವಾ ಸ್ನೇಹಿತರನ್ನು ಕೇಳುತ್ತಾರೆ ಆದರೆ ಇಲ್ಲೊಬ್ಬ ಭೂಪ ಮದುವೆಯಾಗಲು ಹುಡುಗಿ ಹುಡುಕಿ ಕೊಡಿ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೇ ಪತ್ರ ಬರೆದಿದ್ದಾನೆ.

ಹೌದು! ಈ ರೀತಿಯ ಘಟನೆ ನಡೆದಿರುವುದು ಮಳೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ, ಈ ರೀತಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರ ಬರೆದ ಯುವಕ ಪ್ರವೀಣ್ ಎಂಬಾತ. ಈತ ಭದ್ರಾವತಿಯ ಹೊಸಮನೆ ನಿವಾಸಿ.

ಪುವೀಣ್ ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕರ ಪುತ್ರ, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ, ಆದರೆ ಈಗ ತಮ್ಮದೇ ಜಮೀನಿನಲ್ಲಿ ಕೃಷಿಕನಾಗಿ ಕೆಲಸ ಮಾಡುತ್ತಿದ್ದಾನೆ.

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ನನಗೆ ಮದುವೆಯಾಗಲು ಹುಡುಗಿ ಹುಡುಕಿ ಕೊಡಿ ಎಂದು ಮನವಿ ಮಾಡಿ ಪತ್ರವನ್ನು ಬರೆದಿದ್ದಾನೆ.

ಪೊಲೀಸ್‌ ಇಲಾಖೆ ಪತ್ರವನ್ನು ಸ್ವೀಕರಿಸಿದ್ದು, ಇದರ ಉದ್ದೇಶವೇನು? ಪ್ರವೀಣ್ ಏನಾದರೂ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆಯೇ ಅಥವಾ ನೋವಿನಲ್ಲಿ ಇದ್ದಾರೋ ಎಂಬುದರ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಇನ್ನು ಇವರು ಬರೆಇರುವ ಪತ್ರ ಇತ್ತೀಚೆಗೆ ಆದಿಚುಂಚನಗಿರಿಯಲ್ಲಿ ನಡೆದ ವಧು-ವರರ ಅನ್ವೇಷಣಾ ಸಮಾರಂಭವನ್ನು ನೆನಪಿಸುವಂತಿದೆ. ಅಲ್ಲಿ ಕೇವಲ 250 ಮಧುಗಳಿಗೆ ಬಂದಿದ್ದು 13 ಅಆವಿರಕ್ಕೂ ಹೆಚ್ಚು ವರರು, ಈ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಗಾಯಗೊಂಡಿದ್ದರು. ಅದನ್ನು ಇಲ್ಲಿ ಸ್ಮರಿಸಬಹುದು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...