CRIMENEWS

ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆಯಂತೆ ಜಲಮೂಲ ಕಲುಷಿತ ಮಾಡಿದವರ ವಿರುದ್ಧ ಕ್ರಮ. ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ವಹಿಸಿದ್ದು, ಖಾಸಗಿ ಕ್ಲಿನಿಕ್ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗೆ ಸಚಿವರು ಹಠಾತ್ ಭೇಟಿ ನೀಡಿದ್ದ ವೇಳೆ ಸಾರ್ವಜನಿಕರು ವೈದ್ಯಕೀಯ ತ್ಯಾಜ್ಯವನ್ನು ಕೆರೆಗೆ ಸುರಿದಿರುವ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸ್ಥಳ ಪರಿಶೀಲಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚಿಸಿದ್ದರು.

ಸಚಿವ ಖಂಡ್ರೆ ಅವರ ಸೂಚನೆಯಂತೆ ಸ್ಥಳ ಪರಿಶೀಲನೆ ನಡೆಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿಂದು, ಸಚಿತ್ರ ಮಾಹಿತಿ ನೀಡಿದ ತರುವಾಯ ತಾಲೂಕು ವೈದ್ಯಾಧಿಕಾರಿ ಡಾ. ಪದ್ಮಿನಿ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಪಂ ಇಒ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಬಳಸಿದ ಸಿರೆಂಜ್ ಗಳು ಹಾಗೂ ರಕ್ತಸಿಕ್ತವಾಗಿದ್ದ ಹತ್ತಿ, ಬ್ಯಾಂಡೇಜ್ ಗಳನ್ನು ಸಿಮೆಂಟ್ ಬ್ಯಾಗ್ ಗಳಲ್ಲಿ ತುಂಬಿ ಕೆರೆಗೆ ನೀರು ಹೋಗುವ ಕಾಲುವೆಯಲ್ಲಿ ಎಸೆದಿರುವುದು ಪತ್ತೆಯಾಗಿದೆ.

ಜನ, ಜಾನುವಾರು ಈ ಕೆರೆಯ ನೀರು ಬಳಸುವ ಕಾರಣ ರೋಗ ಹರಡುವ ಸಾಧ್ಯತೆಯ ಗಂಭೀರತೆಯನ್ನು ಅರಿತು ಖಾಸಗಿ ಕ್ಲಿನಿಕ್ ವೈದ್ಯ ಡಾ. ಅರುಣ್ ಗಿರೀಶ್ ಸಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈದ್ಯರು ಇದು ತಮ್ಮ ಆಸ್ಪತ್ರೆಯ ತ್ಯಾಜ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಎಚ್ಚರಿಕೆ ಗಂಟೆ: ಕುಡಿಯುವ ನೀರಿನ ಮೂಲಗಳಾದ ಕೆರೆ, ಕುಂಟೆ, ಬಾವಿ, ನದಿಗಳಿಗೆ ಅಪಾಯಕಾರಿ ತ್ಯಾಜ್ಯವನ್ನು ಎಸೆದು ಹೋಗುವವರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ.

Deva
the authorDeva

Leave a Reply

error: Content is protected !!
Latest news
ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್‌ ಬೃಹತ್‌ ಪಾದಯಾತ್ರೆ- ಇದು ಕೇವಲ ಭಾಷಣಕ್ಕಷ್ಟೇ ಅಲ್ಲ: ನಿಖಿಲ್ ಕುಮಾರಸ್ವಾಮಿ ಎಚ್... ನಿಂತಿರುವ ಕಾಲೇಜು ವಿದ್ಯಾರ್ಥಿ ಚುನಾವಣೆ ಇದೇ ವರ್ಷದಿಂದ ಮತ್ತೆ ಆರಂಭ: ಸಿಎಂ ಡಿಕೆಶಿ ಅಪ್ಪ ಅಂದ್ರೆ ಭಯ- ಧೈರ್ಯ ಅಪ್ಪ ಅಂದ್ರೆ ಭವಿಷ್ಯದ ಗುರು ಅಪ್ಪ ಅಂದ್ರೆ ಆಲದ ಮರ ಇದಾವುದು ಅಲ್ಲ ಪದಗಳಿಗೆ ನಿಲುಕದ ದೈವ ಗ್ರಾಚ್ಯುಟಿ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸಲ್ಲ KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ