CrimeNEWSದೇಶ-ವಿದೇಶಸಂಸ್ಕೃತಿ

ಗುಜರಾತ್‌ನಿಂದ ಚಾಮುಂಡಿ ಬೆಟ್ಟಕ್ಕೆ ಬಂದ ಬಸ್‌ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿಬೆಟ್ಟದ ಬಸ್‌ ನಿಲ್ದಾಣ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತು.

ಅರಮನೆ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅವಘಡ ಸಂಭವಿಸಿದೆ. ನಾಡ ದೇವತೆ ಚಾಮುಂಡಿಯ ದರ್ಶನಕ್ಕೆ ಬಂದ ಭಕ್ತರಲ್ಲಿ  ಇದರಿಂದ ಕೆಲ ಕಾಲ ಆತಂಕ ಮೂಡಿತ್ತುತು. ಆದರೆ ದೇವಿಯ ಕೃಪೆ  ಮತ್ತು  ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

ಗುಜರಾತ್‌ನಿಂದ ಪ್ರವಾಸಿಗರನ್ನು ಹೊತ್ತ ಬಸ್‌ ಚಾಮುಂಡಿಬೆಟ್ಟಕ್ಕೆ ಬಂದಿತ್ತು. ಈ ವೇಳೆ ಬೆಟ್ಟದ ಸಮೀಪದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಡಿಸೇಲ್ ಸೋರಿಕೆಯಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲದೆ ಚಾಲನೆಯಲ್ಲಿದ ಬಸ್‌ನ ಸೈಲೆನ್ಸರ್ ನಿಂದ ಹೊಗೆ ಬರಲಾರಂಭಿಸಿದೆ.

ಕೂಡಲೇ ಅದನ್ನು ಗಮನಿಸಿದ ಚಾಲಕ ಬೆಂಕಿಯ ಸಂಪರ್ಕದ ವೈರ್‌ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್‌ನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಬಸ್‌ ಭಸ್ಮವಾಗುವುದು ತಪ್ಪಿದ್ದು ಇತ್ತ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾದಂತಾಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ