Please assign a menu to the primary menu location under menu

CrimeNEWSದೇಶ-ವಿದೇಶ

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಐದು ಮಂದಿ ಮೃತ, 10 ಜನರಿಗೆ ಸುಟ್ಟಗಾಯ

ವಿಜಯಪಥ ಸಮಗ್ರ ಸುದ್ದಿ

ಮದುರೈ: ತಮಿಳುನಾಡಿನ ಮದುರೈ ಜಿಲ್ಲೆ ಸಮೀಪದ ಅಳಗುಸಿರೈ ಗ್ರಾಮದಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿಗೆ ಗಂಭೀರವಾದ ಸುಟ್ಟಗಾಯಗಳಾಗಿವೆ.

ಘಟಕದಲ್ಲಿ 15ಕ್ಕೂ ಹೆಚ್ಚುಮಂದಿ ಪಟಾಕಿ ತಯಾರಿಕೆಯಲ್ಲಿ ನಿರತರಾಗಿದ್ದಾಗ ಸ್ಫೋಟ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಈ ಘಟಕವನ್ನು ಎ. ಅನಸೂಯ ಎಂಬವರು ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ದುರಂತದಲ್ಲಿ ಮೃತಪಟ್ಟವರನ್ನು ಅಮಾವಾಸೈ, ವಲ್ಲರಸು, ಗೋಪಿ, ವಿಕಿ ಹಾಗೂ ಪ್ರೇಮಾ ಎಂದು ಗುರುತಿಸಲಾಗಿದೆ. ಗಂಭೀರವಾದ ಸುಟ್ಟಗಾಯಗಳಾಗಿರುವವರನ್ನು ರಾಜಾಜಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ಘಟನೆಯ ಬೆನ್ನಲ್ಲೇ ಜಿಲ್ಲಾಡಳಿತದ ಅಧಿಕಾರಿಗಳು, ತಮಿಳುನಾಡು ಅಗ್ನಿಶಾಮಕದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ವಾಣಿಜ್ಯತೆರಿಗೆಗಳು ಹಾಗೂ ನೋಂದಣಿ ಸಚಿವ ಪಿ.ಮೂರ್ತಿ ಹಾಗೂ ಮದುರೈ ಜಿಲ್ಲಾಧಿಕಾರಿ ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲನೆ ನಡೆಸಿದರು. ಪಟಾಕಿ ದುರಂತದಲ್ಲಿ ಐವರು ಮೃತಪಟ್ಟ ಘಟನೆಗೆ ತಮಿಳುನಾಡು ಮುಖ್ಯಮಂತ್ರಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ ಹಾಗೂ ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...