CrimeNEWSನಮ್ಮಜಿಲ್ಲೆ

ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ: ಅಪ್ಪ, ಅಮ್ಮ, ಮಕ್ಕಳದ್ದಿರಬಹುದೆಂಬ ಶಂಕೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರದಿಂದ ಚಳ್ಳಕೆರೆಗೆ ಹೋಗುವ ಮಾರ್ಗದಲ್ಲಿ ಚಳ್ಳಕೆರೆ ಗೇಟ್‌ನ ಸಮೀಪದಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಸಿಕ್ಕಿವೆ. ಈ ಮನೆಯು ಪಿಡಬ್ಲ್ಯೂಡಿ ಇಲಾಖೆಯ ಮಾಜಿ ಇಂಜಿನಿಯರ್ ಒಬ್ಬರ ಮನೆಯಾಗಿದ್ದು, ಅದೇ ಮನೆಯಲ್ಲಿ ಅಸ್ಥಿಪಂಜರಗಳು ಸಿಕ್ಕಿವೆ.

ಹಳೆ ಬೆಂಗಳೂರು ರಸ್ತೆಯಲ್ಲಿರುವ ‘ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದನಹಳ್ಳಿ ಗ್ರಾಮ’ ಎಂಬ ನಾಮಫಲಕ ಹೊಂದಿರುವ ಮನೆಯಲ್ಲಿ ಈ ಅಸ್ಥಿಪಂಜರಗಳು ಪತ್ತೆಯಾಗಿವೆ. ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರಗಳು ಕಂಡು ಬಂದಿದ್ದು, ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕೂಡ ಇದೆ. ಇನ್ನು ಅಸ್ಥಿಯನ್ನು ನೋಡಿದ ಜನರು ಬೆಚ್ಚಿಬಿದ್ದು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು.

ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಇದೀಗ ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಾ ಹಾಗೂ ಮಗಳು ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಜಗನ್ನಾಥ ರೆಡ್ಡಿಗೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದರು ಎಂದು ಹೇಳಲಾಗಿದೆ.

ಇನ್ನು ಈ ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು. ಹೀಗಾಗಿ ಜಗನ್ನಾಥ ರೆಡ್ಡಿಯವರ ಪತ್ನಿ ಅಸ್ವಸ್ಥರಾಗಿದ್ದು, 2 ಕೋಟಿ ರೂ. ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗಿರಲಿಲ್ಲ. ಅಲ್ಲದೆ ಈ ಮನೆಯವರು ಯಾರನ್ನೂ ಒಳಬಿಟ್ಟುಕೊಳ್ಳುತ್ತಿರಲಿಲ್ಲ. ಬಾಗಿಲು ತೆರೆಯದೇ ಕಿಟಕಿಯಿಂದ ಮಾತನಾಡಿಸಿ ಕಳುಹಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಮನೆಯಲ್ಲಿ ಆಕ್ಸಿಜನ್‌ ಸಿಲಿಂಡರ್‌ ಕೂಡ ಕಂಡುಬಂದಿದೆ. ಆದರೆ ಈ ಪ್ರಕರಣ ಹೆಚ್ಚಿನ ಕುತೂಹಲ ಗರಿಗೆದರಿಸುವಂತಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು ಯಾರದು? ಎಲ್ಲರೂ ಏಕಕಾಲಕ್ಕೆ ಸತ್ತರೇ? ಸಾವಿಗೆ ಆತ್ಮಹತ್ಯೆ ಕಾರಣವೇ? ‌ಸಾವಿಗೆ ಕಾಯಿಲೆ ಅಥವಾ ಅನ್ಯ ಕಾರಣಗಳಿದ್ದಿರಬಹುದೇ? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದದ್ದು ಹೇಗೆ? ಎಂಬ ಪ್ರಶ್ನೆಗಳು ಮೂಡತೊಡಗಿವೆ.

ಈ ಕುರಿತು ಇದೀಗ ಪೊಲೀಸರು ತನಿಖೆ ಆರಂಭಿಸಿದ್ದು, ಈ ನಡುವೆ ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್, ಪಿಎಸ್ಐ ರಘು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಂಡ ಹಾಗೂ ವಿಧಿ ವಿಜ್ಞಾನ ತಂಡ ಕೂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದೆ.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...