NEWSನಮ್ಮರಾಜ್ಯವಿಡಿಯೋ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲೇ ಪ್ರವಾಹ – ಕೊಚ್ಚಿಕೊಂಡು ಹೋಗುತ್ತಿರುವ ಕಾರುಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ವರುಣನ ಆರ್ಭಟಕ್ಕೆ ಇಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದ್ದು ವಾಗನಗಳು ಹೆದ್ದಾರಿಯಲ್ಲೇ ಕೊಚ್ಚಿಕೊಂಡು ಹೋಗುತ್ತಿವೆ. ಹೀಗಾಗಿ ರಸ್ತೆ ಮಧ್ಯದಲ್ಲೇ ಹಲವಾರು ವಾಹನಗಳು ಸಿಲುಕಿದ್ದು ಜನರು ಪರಿತಪ್ಪಿಸುವಂತಾಗಿದೆ.

ರಾಮನಗರದ ವಡೇರಹಳ್ಳಿ ಬಳಿ ಪ್ರವಾಹದಂತೆ ಮಳೆ ನೀರು ಹರಿಯುತ್ತಿದ್ದು, ವಾಹನಗಳು ಸಂಪೂರ್ಣವಾಗಿ ನಿರಿನಲ್ಲಿ ಮುಳುಗಿರುವ ದೃಶ್ಯವನ್ನು ನೀವು ನೋಡಬಹುದು.

ಈ ಹೆದ್ದಾರಿಗೆ ಬರದೇ ಇರುವುದು ಒಳಿತು : ಎಚ್‌ಡಿಕೆ- ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬೆಂಗಳೂರು-ಬೆಂಗಳೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ ಎಂದು ತಿಳಿಸಿದ್ದಾರೆ.

ರಾಮನಗರಕ್ಕೆ ಮಧ್ಯಾಹ್ನ ಸಿಎಂ ಬೊಮ್ಮಾಯಿ ಭೇಟಿ:  ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿ ವೀಕ್ಷಣೆಗೆಸೋಮವಾರ ಮಧ್ಯಾ ಹ್ನ ಮುಖ್ಯ ಮಂತ್ರಿ ಬಸವರಾಜಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ಮಧ್ಯಾ ಹ್ನ 1.30ಕ್ಕೆ ಅವರು ಬರಲಿದ್ದು , ರಾಮನಗರ ಹಾಗೂ ಚನ್ನ ಪಟ್ಟ ಣ ತಾಲ್ಲೂಕಿಗಳಲ್ಲಿನ ಮಳೆ ಹಾನಿ ವೀಕ್ಷಿ ಸಲಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಜತೆಗಿರಲಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ