Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರುನಾಡಿನಲ್ಲಿ ವಾಸಿಸುತ್ತಿರುವ ಕಡು ಬಡವರ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಒಂದಾಗಿದೆ. ಈ ಪಡಿತರ ಚೀಟಿದಾರರು ತಮ್ಮ ಕುಟುಂಬದವರ ಹೆಸರು ಬಿಟ್ಟು ಹೋಗಿದ್ದರೆ ಅದನ್ನು ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

ಹೌದು! ಆಹಾರ ಇಲಾಖೆ ಮೂಲಕ ಬಡವರಿಗೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಪತ್ನಿ ಹೆಸರು ಸೇರಿಸಬೇಕೆಂದರೆ ಯಾವೆಲ್ಲ ದಾಖಲೆಗಳು ಕಡ್ಡಾಯವಾಗಿ ಬೇಕಾಗುತ್ತವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಕೊಡಲಾಗಿದೆ.

ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಹೊಸದಾಗಿ ಮದುವೆಯಾದ ಬಳಿಕ ಪತ್ನಿ ಹೆಸರು ಸೇರ್ಪಡೆ ಮಾಡಲು ಬೇಕಾಗುವ ದಾಖಲೆಗಳ ಬಗ್ಗೆ ವಿವರವನ್ನು ನೀಡಲಾಗಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸ್ವಯಂ ಆಗಿ ಕೂಡ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು: * ಆಧಾರ್ ಕಾರ್ಡ್ * ಮದುವೆ ಪ್ರಮಾಣ ಪತ್ರ * ಪಾಲಕರ ಪಡಿತರ ಚೀಟಿ ಅಗತ್ಯ.ಇನ್ನು ಮಕ್ಕಳನ್ನು ಸೇರಿಸುವುದಕ್ಕೆ ಮಗುವಿನ ಜನನ ಪ್ರಮಾಣಪತ್ರ, ಹೆತ್ತವರ ಆಧಾರ್ ಕಾರ್ಡ್ ಈ ಪ್ರಕ್ರಿಯೆಯನ್ನು ಅನುಸರಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇನ್ನು ತಾವು ವಾಸಿಸುವ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ನಿಮ್ಮ ID ಅನ್ನು ರಚಿಸಬೇಕು. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ, ಲಾಗಿನ್ ಆಗಬೇಕು. ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡಬಹುದಾಗಿದೆ.

ಇನ್ನು ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ನೀಡಲಾಗಿದ್ದು, ಅದರ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕು. ಜತೆಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ಟ್ರ್ಯಾಕ್ ಮಾಡಬಹುದು. ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು.

ಅಲ್ಲದೆ ತಾವು ಹತ್ತಿರದ ಪಡಿತರ ಅಂಗಡಿಗೆ ಹೋಗಿ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದಾಗಿದೆ. ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕು. ಹೆಂಡತಿಯ ಹೆಸರನ್ನು ಸೇರ್ಪಡೆ ಅವರ ಆಧಾ‌ರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕು.

ಹೊಸ ಸದಸ್ಯರ ಸೇರ್ಪಡೆ ಹೇಗೆ: ಅಧಿಕೃತ ವೆಬ್ ಸೈಟ್ https://ahara.kar.nic.in/home ಗೆ ಭೇಟಿ ನೀಡಿ ಮುಖ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ. ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ. ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ. ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ. ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್‌ ಆಗಿರುವ ಹೊಸ ಪಡಿತರ ಚೀಟಿ ಬರಲಿದೆ.

Leave a Reply

error: Content is protected !!
LATEST
ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ