NEWSಕೃಷಿದೇಶ-ವಿದೇಶನಮ್ಮರಾಜ್ಯ

ಮೈಸೂರಿನಿಂದ ರೈತರ ದೆಹಲಿ ಚಲೋಗೆ ಹೊರಟ ಅನ್ನದಾತರು: ಕುರುಬೂರು ಶಾಂತಕುಮಾರ್ ನೇತೃತ್ವ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. 60ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ರೈತರ ದೆಹಲಿ ಚಲೋಗೆ ಮೈಸೂರಿನಿಂದ ನೂರಾರು ರೈತರು ಹೊರಟಿದ್ದಾರೆ.

ಇಂದು ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ದೆಹಲಿಯತ್ತ ಹೊರಡಲು ಸಿದ್ಧರಾಗಿ ಬಂದಿದ್ದ ರೈತರು, ರೈತ ಮಹಿಳೆಯರನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ರೈತ ರತ್ನ ಕುರುಬೂರು ಶಾಂತಕುಮಾರ್ ಸ್ವಾಗತಿಸಿರು.

ದೆಹಲಿಯಲ್ಲಿ ಇದೇ ಫೆ.13 ರಂದು ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆ ಕರೆ ನೀಡಿರುವುದನ್ನು ಬೆಂಬಲಿಸಿ ಕರ್ನಾಟಕದಿಂದಲೂ ನೂರಾರು ರೈತರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ದೆಹಲಿ ಕಡೆ ಅನ್ನದಾತರು ಹೊರಟರು.

ಇದೇ ವೇಳೆ ರೈಲ್ವೆ ನಿಲ್ದಾಣದಲ್ಲಿ ಮಾತನಾಡಿದ ಕುರುಬೂರ್ ಶಾಂತಕುಮಾರ್, ಕೇಂದ್ರ ಸರ್ಕಾರ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ರೈತರ ಹಿತ ಶಕ್ತಿಯನ್ನು ಕಾಪಾಡಬೇಕು. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತರತ್ನ ನೀಡಿ ಗೌರವಿಸುವ ಸರ್ಕಾರ ಅವರು ರೈತರ ಪರ ನೀಡಿರುವ ವರದಿಯನ್ನು ಯಾಕೆ ಜಾರಿ ಮಾಡುತ್ತಿಲ್ಲ ಎಂಬ ಅನುಮಾನ ಬರಿಸುತ್ತಿದೆ ಎಂದರು.

ಇನ್ನು ರೈತರ ಹಕ್ಕೂತ್ತಾಯಗಳ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆ ರೈತರ ಪಾಲಿಗೆ ಕರಾಳ ಚುನಾವಣೆಯಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯದ ಬೇರೆ ಬೇರೆ ಭಾಗದಿಂದ ಬೇರೆ ಬೇರೆ ರೈಲುಗಳ ಮೂಲಕ ಸಾವಿರಾರು ಸಂಖ್ಯೆಯಲ್ಲಿ ದೆಹಲಿ ಚಲೋ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ರೈತ ಮುಖಂಡರುಗಳ ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಮೂಕಳ್ಳಿ ಮಹದೇವಸ್ವಾಮಿ, ಕುರುಬೂರು ಸಿದ್ದೇಶ್, ಗೌರಿಶಂಕರ, ಶಿವಮೂರ್ತಿ, ಕಮಲಮ್ಮ, ಪ್ರದೀಪ್, ನಾಗರಾಜ್ ಮೂರ್ತಿ ಮುಂತಾದವರು ದೆಹಲಿಯ ಕಡೆ ಪ್ರಯಾಣ ಬೆಳೆಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ