NEWSನಮ್ಮಜಿಲ್ಲೆನಮ್ಮರಾಜ್ಯ

ಸೀಟಿಗಾಗಿ ಬಡಿದಾಡಿಕೊಂಡ ನೀರೆಯರು: ನಿಜವಾದ ನಾರಿ ಶಕ್ತಿ ಅನಾವರಣ ಎಂದ ನೆಟ್ಟಿಗರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರಿಗೆ ರಾಜ್ಯದಲ್ಲಿ ಉಚಿತ ಪ್ರಯಾಣಕ್ಕೆ ಬಸ್‌ಗಳಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳಬೇಕಾದ ನಾರಿಯರು ಮಾತ್ರ ಬಡದಾಡಿಕೊಳ್ಳುತ್ತಿರುವುದು ಸಭ್ಯ ಮಹಿಳೆಯರಿಗೆ ಇರಿಸುಮುರಿಸು ಉಂಟುಮಾಡುತ್ತಿದೆ.

ಹೌದು! ಇಂದು ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗುತ್ತಿವೆ ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆಯುತ್ತಿದೆ. ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ. ಅಷ್ಟೇ ಅಲ್ಲದೇ ಇದೀಗ ಫ್ರೀ ಬಸ್​ನಲ್ಲಿ ಸೀಟ್​​ಗಾಗಿ ಮಾರಾಮಾರಿ ಕೂಡ ನಡೆದೇ ಬಿಟ್ಟಿದೆ.

ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರ ನಡುವೆ ಹೊಡೆದಾಟವಾಗಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಮೈಸೂರು ಸಿಟಿ ಬಸ್​ ನಿಲ್ದಾಣದಲ್ಲಿ ನಡೆದಿದ್ದು ಜಗಳ ಬಿಡಿಸಲು ಪುರುಷರು ಕೂಡ ಹರಸಾಹಸ ಪಟ್ಟಿದ್ದಾರೆ.

ಆಷಾಡ ಮಂಗಳವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಲೆಂದು ಮಹಿಳೆಯೊಬ್ಬರು ಕಿಟಕಿ ಮೂಲಕ ಸೀಟಿಗೆ ಕರವಸ್ತ್ರ ಹಾಕಿ ಕಾಯ್ದಿಸಿದ್ದಾರೆ. ಅದನ್ನು ಗಮನಿಸಿದ ಮತ್ತೋರ್ವ ಮಹಿಳೆ ಸೀಟಿನ ಮೇಲೆ ಹಾಕಲಾಗಿದ್ದ ಕರ್ಚೀಫ್​ ಅನ್ನು ತೆಗೆದು ಬಿಸಾಡಿದ್ದಾರೆ.

ಬೀಸಡಿದ್ದು ನೋಡಿದ ಮಹಿಳೆ ಈ ವಿಚಾರವಾಗಿ ಕೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವಿನ ಜಡೆ ಹಿಡಿದು ಎಳೆದಾಡುವ ಮಟ್ಟಕ್ಕೆ ಹೋಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ನೀರೆಯರು ಹೊಡೆದಾಡಿಕೊಳ್ಳುವ ಮಟ್ಟವನ್ನು ತಲುಪಿದ್ದಾರೆ. ಘಟನೆಯನ್ನು ತಡಯುವುಕ್ಕ ಹಲವರು ಪ್ರಯತ್ನಪಟ್ಟಿದ್ದಾರ. ಆ ವಿಡಿಯೋ ಸದ್ಯ ವೈರಲ್​ ಆಗಿದ್ದು, ನಿಜವಾದ ನಾರಿ ಶಕ್ತಿ ಅನಾವರಣ ಆಯಿತು ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?