NEWS

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಬಿಜೆಪಿ ನಾಯಕರ ಭೇಟಿ ಕುರಿತು ಸ್ಪಷ್ಟನೆಯನ್ನೂ ನೀಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿದ ಅವರು, ಈ ವೇಳೆ ಮಾತನಾಡಿ, ದೆಹಲಿ ಬಿಜೆಪಿ ನಾಯಕರ ಭೇಟಿ ವಿಚಾರವನ್ನು ಅಲ್ಲಗಳೆದರು.

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಯಾವುದೇ ಸೀಟು ಹಂಚಿಕೆ ಕುರಿತು ಚರ್ಚಗೆ ಹೋಗ್ತಿಲ್ಲ. ಬದಲಾಗಿ ವೈಯಕ್ತಿಕ ಕೆಲಸದ ನಿಮಿತ್ತ ಹೋಗುತ್ತಿದ್ದೇನೆ. ದೆಹಲಿಗೆ ಹೋಗೋದು ಏನ್ ವಿಶೇಷನಾ ಎಂದು ಕೇಳಿದರು.

ಸೀಟು ಹಂಚಿಕೆ ಕುರಿತು ಬಿಜೆಪಿ ನಾಯಕರ ಜತೆ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಅದನ್ನು ಕುಮಾರಸ್ವಾಮಿ ಅವರು ಅಲ್ಲಗಳೆದಿದ್ದಾರೆ. ಆದರೂ ದೆಹಲಿಯತ್ತ ಬಿಳಿ ಶರ್ಟ್, ಪಂಚೆ ಉಡುಗೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ