ಮೈಸೂರು: ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ವೀರ ಸಾವರ್ಕರ್ ರಥಯಾತ್ರೆಗೆ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.
ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಬಿಎಸ್‌ವೈ, ಎಂಟು ದಿನಗಳ ಈ ಯಾತ್ರೆ ರಾಜ್ಯದ ಅಷ್ಟದಿಕ್ಕುಗಳಲ್ಲೂ, ವೀರ್ ಸಾವರ್ಕರ್ ಅವರ ಜೀವನ ಮೌಲ್ಯ, ದೇಶ ಪ್ರೇಮದ ಸಂದೇಶವನ್ನು ಸಾರಲಿದೆ ಎಂದು ತಿಳಿಸಿದರು.
ಇನ್ನು ದೇಶ ಇಂದು ಮಹತ್ವದ ಕಾಲಘಟ್ಟದಲ್ಲಿದೆ. ಒಂದೆಡೆ, ದೇಶ ವಿಶ್ವಗುರು ಅಗುವತ್ತ ದಾಪುಗಾಲು ಇಡುತ್ತಿದೆ. ಇನ್ನೊಂದೆಡೆ ಅನೇಕ ಸವಾಲುಗಳು ನಮ್ಮ ಮುಂದಿದೆ. ದೇಶದ ಮೌಲ್ಯಗಳಿಗೆ ಮಸಿ ಬಳಿಯುವ ಕೆಲಸ ಕೆಲವರಿಂದ ನಡೆಯುತ್ತಿದೆ. ಈ ಪೈಕಿ, ಮುಖ್ಯವಾದದ್ದು ಸಾವರ್ಕರ್ ವಿರುದ್ಧ ಅಪಪ್ರಚಾರ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಗೌಡ, ಲೋಕಸಭಾ ಸದಸ್ಯರು, ಶಾಸಕರುಗಳು, ಪಾಲಿಕೆ ಅಧ್ಯಕ್ಷರು, ಪಾಲಿಕೆಯ ಸದಸ್ಯರು, ಹಿರಿಯ ಮುಖಂಡರು, ಮಂಡಲದ ಪದಾಧಿಕಾರಿಗಳು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು.
ಶಕ್ತಿ ಕೇಂದ್ರದ ಅಧ್ಯಕ್ಷರು, ವಿವಿಧ ಮೋರ್ಚಾದ ಅಧ್ಯಕ್ಷರು & ಪ್ರಧಾನ ಕಾರ್ಯದರ್ಶಿಗಳು, ಕ್ಷೇತ್ರದ ಕಾರ್ಯಕಾರಿಣಿ ಸದಸ್ಯರು , ಪ್ರಕೋಷ್ಟದ ಸಂಚಾಲಕರು & ಸಹ ಸಂಚಾಲಕರು , ಮೋರ್ಚಾದ ಕಾರ್ಯಕಾರಣಿ ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.