NEWS

ಕಾವೇರಿ ನಿವಾಸ ತೊರೆದ ಮಾಜಿ ಸಿಎಂ ಯಡಿಯೂರಪ್ಪ- ಕುಮಾರಕೃಪಾಕ್ಕೆ ಬರಲಿರುವ ಡಿಸಿಎಂ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 4 ವರ್ಷಗಳಿಂದ ವಾಸವಾಗಿದ್ದ ಕುಮಾರ ಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಕಾವೇರಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಬಿಟ್ಟುಹೋಗಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಕಾರಣ ಸರ್ಕಾರಿ ನಿವಾಸವನ್ನು ಬಿಎಸ್‌ವೈ ಖಾಲಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಖಾಸಗಿ ನಿವಾಸ ಧವಳಗಿರಿಗೆ ಸದ್ಯ ಶಿಫ್ಟ್ ಆಗಿದ್ದಾರೆ.

ಬಿಎಸ್‌ವೈ 2019 ರಲ್ಲಿ ಸಿಎಂ ಆದಾಗ‌ ಇದೇ ಕಾವೇರಿ ನಿವಾಸದಲ್ಲಿದ್ದ ಸಿದ್ದರಾಮಯ್ಯ ಆರು ತಿಂಗಳವರೆಗೂ ನಿವಾಸ ಖಾಲಿ ಮಾಡಿರಲಿಲ್ಲ. ಆದರೆ ಆರು ತಿಂಗಳು ಕಾಯಿಸಿದ್ದ ಸಿದ್ದರಾಮಯ್ಯ ಸಿಎಂ ಆದ ನಂತರ ಯಡಿಯೂರಪ್ಪನವರು ತಡ ಮಾಡದೇ ಕೇವಲ 11 ದಿನಗಳಲ್ಲೇ ಕಾವೇರಿ ನಿವಾಸವನ್ನು ತೆರವು ಮಾಡಿದ್ದಾರೆ.

ಬಿಎಸ್‌ವೈ ಮನೆ ತೊರೆದ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯ ಬಿಜೆಪಿಯ ರಾಜಕೀಯ ಚಟುವಟಿಕೆ ಕೇಂದ್ರವಾಗಿ ಧವಳಗಿರಿ ನಿವಾಸ ಮಾರ್ಪಾಡಾಗಲಿದೆ. ಬಿಜೆಪಿ ನಾಯಕರು ಇನ್ಮುಂದೆ ಧವಳಗಿರಿ ನಿವಾಸಕ್ಕೆ ಭೇಟಿ ನೀಡಲಿದ್ದು, ಪ್ರಮುಖ ಸಭೆಗಳು ಧವಳಗಿರಿಯಲ್ಲೇ ನಡೆಯಲಿವೆ.

ಸಿದ್ದರಾಮಯ್ಯ ಅವರಿಂದ ಯಡಿಯೂರಪ್ಪ ಪಾಲಾಗಿದ್ದ ಕಾವೇರಿ ಮತ್ತೆ ಇದೀಗ ಸಿದ್ದರಾಮಯ್ಯ ವಶಕ್ಕೆ ಸಿಕ್ಕಂತಾಗಿದೆ. ಕೆಲವೊಂದು ಸಣ್ಣಪುಟ್ಟ ದುರಸ್ತಿ ಹಾಗೂ ಮನೆಗೆ ಪೇಂಟಿಂಗ್ ಮಾಡಿಸಿಕೊಂಡು ಸದ್ಯವೇ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಸ್ಥಳಾಂತರವಾಗಲಿದ್ದಾರೆ.

ಕಾವೇರಿ ನಿವಾಸವನ್ನು ರಾಜಕೀಯ ವಲಯದಲ್ಲಿ ಅದೃಷ್ಟದ ನಿವಾಸ ಎಂದು ಕರೆಯಲಾಗುತ್ತಿದೆ. 2004ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಬಿಎಸ್‌ವೈ ನಂತರ ಇದೇ ಮನೆಯಲ್ಲಿಯೇ ಇದ್ದಾಗ ಉಪ ಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿದ್ದರು. 2008ರಲ್ಲಿ ಸಿಎಂ ಆದಾಗ ಯಡಿಯೂರಪ್ಪ ಇದೇ ಮನೆಯಲ್ಲಿ ಇದ್ದರು. ಈ ಮನೆಗೆ ಬಂದ ಮೇಲೆ ಸಿಎಂ ಸ್ಥಾನ ಸಿಕ್ಕಿತು ಎಂಬ ನಂಬಿಕೆ ಯಡಿಯೂರಪ್ಪ ಅವರಿಗೆ ಇದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪರಿಗೆ ಕಾವೇರಿ ನಿವಾಸ ಅದೃಷ್ಟ ಮನೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಸರ್ಕಾರದ ಪತನವಾದ ಬಳಿಕ 2013ರಲ್ಲಿ ಸಿದ್ದರಾಮಯ್ಯ ಈ ಮನೆಗೆ ತೆರಳಿದ್ದರು. 2019ರಲ್ಲಿ ಬಿಜೆಪಿ ಸರ್ಕಾರ ಬಂದಾಗ ಯಡಿಯೂರಪ್ಪ ಈ ಮನೆಗೆ ತೆರಳಲು ಬಯಸಿದ್ದರು. ಆದರೆ ಸಿದ್ದರಾಮಯ್ಯ ಮನೆ ತೊರೆಯಲು ಒಪ್ಪಿರಲಿಲ್ಲ.

ಬಿ.ಎಸ್. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ `ಕಾವೇರಿ’ ಜಟಾಪಟಿ ತಾರಕಕ್ಕೆ ಏರಿತ್ತು. ಕೊನೆಗೆ ಡಿಪಿಎಆರ್ ಸಿಬ್ಬಂದಿ ನಿವಾಸದಲ್ಲಿದ್ದ ಸಿದ್ದರಾಮ್ಯಯ ಹೆಸರಿನ ಬೋರ್ಡ್ ತೆರವುಗೊಳಿಸಿದ್ದರು. ಈ ಮೂಲಕ ಕಾವೇರಿ ನಿವಾಸವನ್ನು ಖಾಲಿ ಮಾಡುವಂತೆ ಸೂಚನೆ ನೀಡಿದ್ದರು. ಅಷ್ಟೇ ಅಲ್ಲದೇ ಮೂರ್ನಾಲ್ಕು ದಿನಗಳಲ್ಲಿ ನಿವಾಸ ಖಾಲಿ ಮಾಡದೇ ಇದ್ದಲ್ಲಿ ನೀರಿನ ಸಂಪರ್ಕವನ್ನು ಸಹ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಈ ಎಚ್ಚರಿಕೆಯ ಬಳಿಕ ಸಿದ್ದರಾಮಯ್ಯ ಕಾವೇರಿ ನಿವಾಸವನ್ನು ತೊರೆದಿದ್ದರು.

ಇನ್ನು ಸಿದ್ದರಾಮಯ್ಯನವರ ಅದೃಷ್ಟ ಮನೆ ಎಂದೇ ಹೇಳಲಾದ ಕುಮಾರಕೃಪಾ ಸರ್ಕಾರಿ ನಿವಾಸವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯನವರು ಈಗ ಕಾವೇರಿಗೆ ಶಿಫ್ಟ್ ಆಗಲಿದ್ದು, ಬಳಿಕ ಸಿದ್ದರಾಮಯ್ಯನವರ ನಿವಾಸಕ್ಕೆ ಶಿವಕುಮಾರ್​ ಗೃಹ ಪ್ರವೇಶ ಮಾಡಲಿದ್ದಾರೆ.

ಸಿದ್ದರಾಮಯ್ಯ ಅವರು ಈಗ ವಾಸವಿರುವ ನಿವಾಸ ಅದೃಷ್ಟದ ಮನೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್ ಅವರು ಜ್ಯೋತಿಷಿಯವರ ಸಲಹೆ ಮೇರೆಗೆ ಈಗಿರುವ ಸಿದ್ದರಾಮಯ್ಯನವರ ಮನೆಯನ್ನು ಆಯ್ಕೆ ಮಾಡಿದ್ದರು. ಅದರಂತೆ ಆ ಅದೃಷ್ಟದ ಮನೆ ಡಿ.ಕೆ.ಶಿವಕುಮಾರ್ ಪಾಲಾಗಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ