CrimeNEWSನಮ್ಮಜಿಲ್ಲೆ

ಮಾಜಿ ಡಿಸಿಎಂ ಲಕ್ಮಣ ಸವದಿ ಕಾರು ಅಪಘಾತ: ಪ್ರಾಣಾಪಾಯದಿಂದ ನಾಲ್ವರು ಪಾರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾರೂಗೇರಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಲಕ್ಮಣ ಸವದಿ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸಣ್ಣಪುಟ್ಟಗಾಯದೊಂದಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಹಾರೂಗೇರಿ ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಹಿಡಕಲ್ ರಸ್ತೆಯ ತಿರುವಿನ ಹಾರೂಗೇರಿ ಏಕಲವ್ಯ ಕಾಲೇಜು ಹತ್ತಿರ ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆನಾಲ್‌ಗೆ ಪಲ್ಟಿಹೊಡೆದು ಈ ಅಪಘಾತ ಸಂಭವಿಸಿದೆ.

ವಿವರ: ಗೋಕಾಕದಿಂದ ಮರಳಿ ಅಥಣಿ ಕಡೆಗೆ ಹೊರಟಾಗ, ಹಾರೂಗೇರಿ ಕ್ರಾಸ್ ಬಳಿ ಬೈಕೊಂದು ಏಕಾಏಕಿ ಕಾರಿಗೆ ಅಡ್ಡಬಂತು. ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಅವಸರದಲ್ಲಿ ಕಾರ್ ಚಾಲಕನ ನಿಯಂತ್ರ ಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಗೆ ಬೋರಲು ಬಿದ್ದಿತು.

ಕಾರು ಚಾಲಕ ಹಾಗೂ ಪಕ್ಕದಲ್ಲಿ ಕುಳಿತಿದ್ದ ಲಕ್ಷ್ಮಣ ಸವದಿ ಅವರ ತಲೆ, ಕೈಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹಿಂಬದಿ ಸೀಟಿನಲ್ಲಿದ್ದ ಗನ್ಮ್ಯಾನ್ ಹಾಗೂ ಇನ್ನೊಬ್ಬರೂ ಬಚಾವಾಗಿದ್ದಾರೆ.

ಅಪಘಾತವಾದ ತಕ್ಷಣ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಸಂಭವನೀಯ ಅಪಾಯ ತಪ್ಪಿದೆ. ಕಾರು ಪಲ್ಟಿಯಾಗುತ್ತಿದ್ದಂತೆ ಸುತ್ತಲಿನ ಜನ ಸಹಾಯಕ್ಕೆ ಧಾವಿಸಿದರು. ನಂತರ ಸವದಿ ಅವರನ್ನು ಅಥಣಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC