Please assign a menu to the primary menu location under menu

NEWSದೇಶ-ವಿದೇಶಸಂಸ್ಕೃತಿ

ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ʼಭಾರತ ರತ್ನʼ ಪ್ರಶಸ್ತಿ: ಪ್ರಧಾನಿ ಮೋದಿ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (96) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ʼಭಾರತ ರತ್ನʼ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.

ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಮೂಲಕ ಹಂಚಿಕೊಂಡಿದ್ದಾರೆ. ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ. ಈ ಕುರಿತು ಅವರಿಗೆ ದೂರವಾಣಿ ಮೂಲಕ ನಾನೇ ಖುದ್ದಾಗಿ ತಿಳಿಸಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

ಕಳೆದ ತಿಂಗಳು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡಿತು. ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ ಎಂದೇ ಜನಪ್ರಿಯರು ಅಡ್ವಾಣಿಯವರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡ ಬೆನ್ನಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿತ್ತು. ಅದಾದ ಒಂದೇ ವಾರದಲ್ಲಿ ಅಡ್ವಾಣಿಯವರಿಗೆ ಭಾರತ ರತ್ನ ಘೋಷಣೆಯಾಗಿದೆ.

ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 2002 ರಿಂದ 2004 ರವರೆಗೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಇದಕ್ಕೂ ಮೊದಲು ಕೇಂದ್ರ ಗೃಹ ಖಾತೆ ಸೇರಿದಂತೆ ಹಲವು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.

ಎಲ್‌ಕೆ ಅಡ್ವಾಣಿ ಅವರು 1980 ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಾರಂಭದಿಂದಲೂ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸಮ್ಮಿಶ್ರ ಸರ್ಕಾರಗಳ ಮುಖ್ಯಸ್ಥರಾಗಿ 90 ರ ದಶಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದರ ಬೆಳವಣಿಗೆಯನ್ನು ರೂಪಿಸಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ