NEWSದೇಶ-ವಿದೇಶ

ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಹೃದಯಸ್ತಂಭನದಿಂದ ನಿಧನ

ವಿಜಯಪಥ ಸಮಗ್ರ ಸುದ್ದಿ

ಪಣಜಿ: ಹೃದಯಸ್ತಂಭನದಿಂದ (Cardiac Arrest) ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಣಜಿಯಿಂದ 30 ಕಿಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದು, ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು.

ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ 1 ಗಂಟೆ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಇನ್ನು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ Xನಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಕೂಡ ರವಿ ನಾಯ್ಕ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಚಿವ ರವಿ ನಾಯ್ಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕರ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಮೋದಿ X ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ