CRIMENEWSದೇಶ-ವಿದೇಶ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹಠಾತ್ ಹೃದಯಾಘಾತದಿಂದ ನಿಧನ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

ತಿರುವನಂತಪುರಂ: ಆಯುರ್ವೇದ ಚಿಕಿತ್ಸೆ ಪಡೆಯಲು ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿತ್ತು. ಈ ಹಿಂದೆ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು ಎಂದು ತಿಳಿದು ಬಂದಿದೆ.

Megha
the authorMegha

Leave a Reply

error: Content is protected !!