NEWSನಮ್ಮಜಿಲ್ಲೆರಾಜಕೀಯ

ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ

ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018 ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು ಶುಕ್ರವಾರ ಮೇ 29ರ ಮುಂಜಾನೆ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಮೃತರು ಪುತ್ರ ಶಾಸಕ ಎಚ್‌.ವಿ.ವೆಂಕಟೇಶ್‌, ಕುಮಾರಸ್ವಾಮಿ, ಪುತ್ರಿ ಪದ್ಮಾವತಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅನಾರೋಗ್ಯಕ್ಕೀಡಾಗಿದ್ದ ವೆಂಕಟರಮಣಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ರಾಜಕೀಯ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018 ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

ಪಾವಗಡ ಪಟ್ಟಟ್ಟಣದ ಗುರುಭವನದಲ್ಲಿ ಇಂದು ಮಧ್ಯಾಹ್ನ ಮೃತರ ಪಾರ್ಥೀವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾವಗಡದ ಮನೆಯ ಮಗ:
ಪಾವಗಡ ಪ್ರದೇಶದ ರಾಜಕೀಯದಲ್ಲಿ ವೆಂಕಟರಮಣಪ್ಪ ಪ್ರಮುಖರಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಕರ್ನಾಟಕ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ, ಗ್ರಾಮೀಣ ಭಾಗದ ಅಭಿವೃದ್ದಿಗೆ ಒತ್ತು ನೀಡುವ ನಾಯಕನಾಗಿ ಅವರು ಹೆಸರಾಗಿದ್ದರು.

ತಮ್ಮ ರಾಜಕೀಯ ಬದುಕಿನ ಅವಧಿಯಲ್ಲಿ ಅವರು ಪಾವಗಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶ್ರಮಿಸಿದ್ದರು. ಜನರ ನಡುವೆ ಸದಾ ಬೆರೆತು, ಸರಳ ಜೀವನ ಶೈಲಿಯನ್ನು ಅನುಸರಿಸುತ್ತಿದ್ದ ವೆಂಕಟರಮಣಪ್ಪ ಅವರನ್ನು ಸಾಮಾನ್ಯ ಮತದಾರರು ತಮ್ಮ ಮನೆಯವರಂತೆ ಕಾಣುತ್ತಿದ್ದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ