CrimeNEWSನಮ್ಮರಾಜ್ಯ

ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್​ ಕೆ.ಜಿ. (41) ವಿಷ ಸೇವಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಬಿಜೆಪಿ ನಾಯಕ ಬಿ.ಸಿ. ಪಾಟೀಲ್ ಅವರ ಮಗಳಾದ ಸೌಮ್ಯ ಅವರ ಪತಿ ತಾಪ್ ಕುಮಾರ್​ ಇಂದು (ಜುಲೈ 08) ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿರುವುದು ಸಾರ್ವಜನಿಕರು ಗಮನಿಸಿದ್ದರಿಂದ ಗೊತ್ತಾಗಿದೆ.

ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಪ್ರತಾಪ್ ಕುಮಾರ್​ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೊನ್ನಾಳಿ ಆಸ್ಪತ್ರಯೊಂದರಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.

ಅಕ್ಕನ ಮಗಳನ್ನೇ ಮದುವೆ ಆಗಿದ್ದ ಪ್ರತಾಪ್​ ಕುಮಾರ್​​..!: ಪ್ರತಾಪ್ ಕುಮಾರ್ ಬಿ.ಸಿ.ಪಾಟೀಲ್‌ ಅವರ ಹೆಂಡತಿಯ ಸ್ವಂತ ತಮ್ಮ. ಇವರಿಗೆ ದೊಡ್ಡ ಮಗಳು ಸೌಮ್ಯ ಅವರನ್ನೇ ಕೊಟ್ಟು ಮದುವೆ ಮಾಡಿದ್ದರು. ಅಂದರೆ ಅಕ್ಕನ ಮಗಳನ್ನೇ ಮದುವೆಯಾಗಿದ್ದರು.

ದಾವಣಗೆರೆಯ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್ ಬದುಕಲ್ಲಿ ಎಲ್ಲವೂ ಸರಿಯಿತ್ತು. ಆದ್ರೂ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಅಳಿಯ ಮೃತಪಟ್ಟ ಮಾಹಿತಿ ತಿಳಿದ ಕೂಡಲೇ ಬಿ.ಸಿ ಪಾಟೀಲ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Leave a Reply

error: Content is protected !!
LATEST
ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸಾರಿಗೆ ನೌಕರರಿಗೆ ನಿರಾಸೆ KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ