Please assign a menu to the primary menu location under menu

CrimeNEWSನಮ್ಮರಾಜ್ಯ

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ ಬೆನ್ನೆಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನೆಲ್ಲೇ ವಿಶೇಷ ತನಿಖಾ ತಂಡ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದೆ.

ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮನೆಯಲ್ಲಿ ಅವರನ್ನು ವಶಕ್ಕೆ ಪಡೆದು ಕರೆದುಕೊಯ್ದರು.

ಸಿಐಡಿ ಕಚೇರಿ ಆವರಣದಲ್ಲಿರುವ ತಮ್ಮಕಚೇರಿಗೆ ರೇವಣ್ಣ ಅವರನ್ನು ಕರೆದುಕೊಂಡು ಹೋಗಿದ್ದು, ಬಳಿಕ ಬೋರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು, ಬಳಿಕ ನ್ಯಾಯಾಧೀಶರ ಮುಂದೆ ಯಾವುದೇ ಸಂದರ್ಭದಲ್ಲಿ ಹಾಜರು ಪಡಿಸಬಹುದು.

ಮಹಿಳೆಯೊಬ್ಬರ ಅಪಹರಣ ಮಾಡಿದ ಆರೋಪದ ಪ್ರಕರಣದಲ್ಲಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಸಂತ್ರಸ್ತ ಮಹಿಳೆ ಆರೋಪಿಸಿ ನೀಡಿರುವ ದೂರಿನ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಅಲ್ಲದೆ, ಅವರ ಪುತ್ರ ಪ್ರಜ್ವಲ್ ಅವರದೆನ್ನಲಾದ ಲೈಂಗಿಕ ದೌರ್ಜನ್ಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಈಗಾಗಲೇ ನೋಟಿಸ್ ನೀಡಿದ್ದು, ರೇವಣ್ಣ ಅವರನ್ನು ಮೊದಲ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿ ಮಾಡಲಾಗಿದೆ.

ಎಸ್‌ಐಟಿ ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ಮೇಲೆ ನೋಟಿಸ್ ನೀಡಿದ್ದಲ್ಲದೆ, ಲುಕ್ ಔಟ್ ನೋಟಿಸ್ ನೀಡಲಾಗಿತ್ತು. ನಿಗದಿತ ಗಡುವಿನೊಳಗೆ ಇಬ್ಬರೂ ಹಾಜರಾಗದ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಬಂದ ಕೂಡಲೇ ಸರ್ಕಾರ ಎಸ್‌ಐಟಿ ತನಿಖಗೆ ವಹಿಸಿತ್ತು. ಈ ವಿಚಾರವು ಕಳೆದೊಂದು ವಾರದಿಂದಲೂ ಭಾರೀ ಸದ್ದು ಮಾಡುತ್ತಿದೆ. ಮುಂದೆ ಯಾವ ಯಾವ ತಿರುವು ಪಡೆದುಕೊಳಳುವುದು ನೋಡಬೇಕಿದೆ.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ