CrimeNEWSನಮ್ಮಜಿಲ್ಲೆ

ಗೃಹ ಸಚಿವರ ನಿವಾಸದ ಎದುರು ಪ್ರತಿಭಟನೆಗೆ ಮುಂದಾದ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿ ಇಬ್ಬರು ಪೊಲೀಸರ ವಶಕ್ಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾದ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯುವ ನೀರಾವರಿ ಯೋಜನೆ ‘ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್’ ವಿರುದ್ಧ ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆಗೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿ ಸಮಿತಿ ಧರಣಿಗೆ ಮುಂದಾಗಿ, ಅದರಂತೆ ಗುರುವಾರ ಬೆಳಗ್ಗೆ 11 ಗಂಟೆಗೆ ತುಮಕೂರಿನ ಹೆಗ್ಗೆರೆಯಲ್ಲಿ ಇರುವ ಜಿ.ಪರಮೇಶ್ವರ್ ಮನೆ ಎದುರು ಪಕ್ಷಾತೀತವಾಗಿ ಹೋರಾಟ ನಡೆಸಲು ಸಮಿತಿ ಮುಂದಾಗಿತ್ತು.

ಮಾಜಿ ಸಚಿವ ಸೊಗಡು ಶಿವಣ್ಣ, ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲಾ ಜಯರಾಮ್ ಸೇರಿದಂತೆ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದವು. ಆದರೆ ಪ್ರತಿಭಟನೆಗೂ ಮುನ್ನವೇ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಬಿಜೆಪಿ ಮುಖಂಡ ಪ್ರಭಾಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆಗೆ ತಯಾರಿ ನಡೆಸುತ್ತಿದ್ದಾಗ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. ಸೊಗಡು ಶಿವಣ್ಣ ಅವರನ್ನು ವಶಕ್ಕೆ ಪಡೆದು ಪ್ರತಿಭಟನೆ ಹತ್ತಿಕ್ಕಲು ಮುಂದಾದ ಪೊಲೀಸರ ನಡೆ ಖಂಡಿಸಿ ಡಿಆರ್ ಕಚೇರಿ ಬಳಿ ಪ್ರತಿಭಟಿಸಲಾಗಿದೆ.

ಈ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದರು. ಖುದ್ದು ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಬಂದಿದ್ದರು.

ಎಕ್ಸ್‌ಪ್ರೆಸ್‌ ಕೆನಾಲ್ ತುಮಕೂರು ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯವ ನೀರಾವರಿ ಯೋಜನೆಯಾಗಿದೆ. ರಾಮನಗರಕ್ಕೆ ನೀರು ಹರಿದರೆ ತುಮಕೂರು ಜಿಲ್ಲೆಯ ಜನತೆಗೆ ನೀರಿನ ಸಂಕಷ್ಟ ಎದುರಾಗಲಿದೆ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ.

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ