ಬೆಂಗಳೂರು: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದೇಶದ ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ತಮ್ಮ ಆರೋಗ್ಯಕ್ಕೆ ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗದಿನವಾದ ಇಂದು ಟ್ವೀಟ್ ಮಾಡಿರುವ ಎಚ್‌ಡಿಡಿ ನನ್ನ ಸಹ ಭಾರತೀಯರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.
ಇನ್ನು ನಾನು 91ನೇ ವಯಸ್ಸಿನಲ್ಲಿದ್ದೇನೆ ಮತ್ತು ನಾನಿನ್ನೂ ಆರೋಗ್ಯವಾಗಿರಲು ಯೋಗವು ಸಹಕಾರಿಯಾಗಿದೆ. ಯೋಗವನ್ನು ಮಾಡುವ ಮೂಲಕ ಪ್ರತಿಯೊಬ್ಬರೂ ಇದರ ಲಾಭ ಪಡೆದುಕೊಳ್ಳಬೇಕು ಎಂಬುವುದು ನನ್ನ ಆಶಯ ಎಂದು ಹೇಳಿದ್ದಾರೆ.
ಇಂದು ವಿಶ್ವವು 9ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮದಲ್ಲಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದು, ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಆಯೋಜಿಸಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ.
Warm greetings to my fellow Indians on International #YogaDay. I have touched the age of 91 and yoga has helped sustain me. I urge everybody to practice yoga and discover its benefits. pic.twitter.com/Nep9SNr2uN
— H D Deve Gowda (@H_D_Devegowda) June 21, 2023