Please assign a menu to the primary menu location under menu

CrimeNEWSದೇಶ-ವಿದೇಶ

ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ.

92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಇಂದು ರಾತ್ರಿ 8 ಗಂಟೆ ಸುಮಾರಿಗೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇತ್ತ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರು ದೌಡಾಯಿಸಿದ್ದು, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಅಂತಿಮ ದರ್ಶನಕ್ಕೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಯಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಮನಮೋಹನ್ ಸಿಂಗ್ ಅವರು ದೇಶದ ಹಣಕಾಸು ಸಚಿವರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. 1991ರಲ್ಲಿ ಪಿ.ವಿ.ನರಸಿಂಹ ರಾವ್ ಅವರ ಸರ್ಕಾರದಲ್ಲಿ ಮೊದಲ ಬಾರಿಗೆ ವಿತ್ತ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದರು.

2004 ರಿಂದ 2014ರವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಏಪ್ರಿಲ್ ತಿಂಗಳಲ್ಲಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯ ಸ್ಥಾನದಿಂದ ನಿವೃತ್ತಿ ಪಡೆದುಕೊಂಡಿದ್ದರು.

Leave a Reply

error: Content is protected !!
LATEST
ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು