ಗದಗ: ವೋಲ್ವೋ ಬಸ್ ಪುನಃ ಆರಂಭಿಸುವಂತೆ ಟೀಂ ಇಂಡಿಯಾದ ಮಾಜಿ ಆಟಗಾರ, ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ ಎಕ್ಸ್ ಮೂಲಕ ಮನವಿ ಮಾಡಿದ್ದಾರೆ.
ಬೆಂಗಳೂರು-ಗದಗ ನಗರಕ್ಕೆ ವೋಲ್ವೋ ಬಸ್ ಸೇವೆಯನ್ನು ಪುನರಾರಂಭಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್ ಅವರಿಗೆ ಎಕ್ಸ್ನಲ್ಲಿ ಟ್ಯಾಗ್ ಮಾಡುವ ಮೂಲಕ ಜೋಷಿ ಮನವಿ ಮಾಡಿದ್ದಾರೆ.
ಬೆಂಗಳೂರು -ಗದಗಕ್ಕೆ ಹೋಗುವ ವೋಲ್ವೋ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ ಮತ್ತು ಇದಕ್ಕೆ ಯಾವುದೇ ವಿವರಣೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಈ ವಿಷಯದಲ್ಲಿ ತಕ್ಷಣವೇ ಚರ್ಚಿಸಬೇಕೆಂದು ವಿನಂತಿಸುತ್ತೇನೆ.
ನಿಮ್ಮ ಸಹಕಾರ ತುಂಬಾ ಮೆಚ್ಚುಗೆಯಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ದಯವಿಟ್ಟು ಈ ಬಸ್ ಅನ್ನು ಮತ್ತೆ ಶುರುಮಾಡಿ ಎಂದು ವಿನಂತಿಯಿಂದ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
2023ರ ಜನವರಿ 9 ರಂದು ಸಾರಿಗೆ ಸಚಿವರಾಗಿದ್ದ ಶ್ರೀರಾಮಲು ಅವರು ಬೆಂಗಳೂರಿನಿಂದ ಗದಗಕ್ಕೆ ವೋಲ್ವೋ ಬಸ್ ಸೇವೆಯನ್ನು ಆರಂಭಿಸಿದ್ದರು.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1 ರಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ಸಂಜೆ 6.15ಕ್ಕೆ ಗದಗ ತಲುಪುತ್ತಿತ್ತು. ಆದರೆ ಈಗ ಈ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಬಸ್ ಸೇವೆ ರದ್ದಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ನಮ್ಮ ಶಾಶಕರಾದ HK Patil sir & Transport ಶಾಶಕರಾದ ಹಾಗು ಮಂತ್ರಿಯಾದ ಶ್ರೀ Ramalinga Reddy sir ದಯವಿಟ್ಟು ಈ ಬಸ್ ಅನ್ನು ಮತ್ತೆ ಶುರುಮಡಿ ಅಂತ ವಿನಂತಿಯಿಂದ ಕೇಳಿಕುಳ್ಳುತ್ತೇನೆ.🇮🇳🙏🏾 ಜೈ ಕನಾಟಕ @CMofKarnataka @RLR_BTM @HKPatilINC pic.twitter.com/fspc9nFwHO
— Sunil Joshi | 🇮🇳 ಸುನಿಲ್ ಜೋಶಿ (@SunilJoshi_Spin) August 18, 2024