ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಅವರ ತಂದೆ, ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಇಂದು (ಸೋಮವಾರ) ಬೆಳಗ್ಗೆ ನಿಧನರಾಗಿದ್ದಾರೆ.
82 ವರ್ಷದ ಮುಲಾಯಂ ಸಿಂಗ್ ಅವರನ್ನು ತೀವ್ರ ಅನಾರೋಗ್ಯದದಿಂದ ಬಳಲುತ್ತಿದ್ದಕ್ಕೆ ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್ ಅವರ ಆರೋಗ್ಯ ಇಂದು ಕ್ಷೀಣಿಸಿತ್ತು. ಆಸ್ಪತ್ರೆಯ ಐಸಿಯುನಲ್ಲಿ ತಜ್ಞರ ತಂಡದಿಂದ ಚಿಕಿತ್ಸೆ ಮುಂದುವರಿಯುತ್ತು, ಆದರೆ ಅವರನ್ನು ಉಳಿಸಿಕೊಳ್ಳುವ ನಮ್ಮ ಪ್ರಯತ್ನ ಸಫಲವಾಗಲಿಲ್ಲ ಎಂದು ಡಾ. ಸಂಜೀವ್ ಗುಪ್ತಾ ತಿಳಿಸಿದರು.