NEWSಸಂಸ್ಕೃತಿ

ಹಾಸನಾಂಬ ದೇವಿ ದರ್ಶನದ ವೇಳೆ ಕರ್ತವ್ಯ ಲೋಪ: ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು ಮಾಡಿ ಡಿಸಿ ಆದೇಶ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನಾಂಬ ದೇವಿ ದರ್ಶನದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಆರ್‌ಐ ಗೋವಿಂದರಾಜ್ ಹಾಗೂ ಯೋಗಾನಂದ್, ವಿಎ ಸಂತೋಷ್ ಅಂಬಿಗರ ಹಾಗೂ ಶಿರಾಜ್ ಮಹಿಮಾ ಪಟೇಲ್ ಅಮಾನತಾದ ಕಂದಾಯ ಇಲಾಖೆ ಸಿಬ್ಬಂದಿ.

ಗೋಲ್ಡ್ ಕಾರ್ಡ್ ಕೌಂಟರ್‌ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ದೇವಾಲಯದ ಒಳಬಿಟ್ಟ ಆರೋಪದ ಮೇಲೆ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಮೊದಲ ದಿನ ಕೂಡ ಕರ್ತವ್ಯದ ಐಡಿ ಕಾರ್ಡ್ ದುರುಪಯೋಗ ಆರೋಪದಲ್ಲಿ ಇಬ್ಬರು ವಾರ್ಡನ್‍ಗಳನ್ನು ಅಮಾನತು ಮಾಡಲಾಗಿತ್ತು.

ಈ ಮೂಲಕ ಕರ್ತವ್ಯ ಪಾಲನೆಯಲ್ಲಿ ಬೇಜವಾಬ್ದಾರಿತನ ತೋರುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯ ಸಂದೇಶವನ್ನು ಜಿಲ್ಲಾಡಳಿತ ನೀಡಿದೆ.

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಶನಿವಾರ (ಅ.11) ಸಾವಿರಾರು ಭಕ್ತರು ಮುಂಜಾನೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದಿದ್ದಾರೆ.

ಕೆಲವರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾದು ನಿಂತಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಸಹಜವಾಗಿಯೇ ಹೆಚ್ಚುಗಿತ್ತು. 1 ಸಾವಿರ ಟಿಕಟ್‌ನ ಸಾಲು ಖಾಲಿ ಇದ್ದರೆ, 300 ರೂ. ಟಿಕೆಟ್‌ನ ದರ್ಶನದ ಸರತಿ ಸಾಲು ಸಂಪೂರ್ಣ ಭರ್ತಿಯಾಗಿದ್ದವು. ಇಂದು (ಅ.12) ರಜೆ ಇರುವುದರಿಂದ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.

Advertisement
Deva
the authorDeva

Leave a Reply

error: Content is protected !!