CrimeNEWSನಮ್ಮಜಿಲ್ಲೆ

ಮಹಿಳೆಯ ನಂಬಿಸಿ ಲಕ್ಷ ಲಕ್ಷ ಹಣ, ಒಡವೇ ದೋಚಿದ ವಂಚಕ: ಮನೆ ಮುಂದೆ ಧರಣಿ

ವಿಜಯಪಥ ಸಮಗ್ರ ಸುದ್ದಿ

ದೇವನಹಳ್ಳಿ: ಒಳ್ಳೇ ಜೀವನ ಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬಳನ್ನು ವಂಚಿಸಿ ಲಕ್ಷ, ಲಕ್ಷ ಹಣ ಪಡೆದು ಕೊನೆಗೆ ಕೈ ಬಿಟ್ಟ ವಂಚನೆ ಕೃತ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಪುರುಷೋತ್ತಮ್ ಎಂಬಾತನೇ ಮಹಿಳೆಗೆ ವಂಚನೆ ಮಾಡಿರೋ ಆರೋಪಿ. ಕಳೆದ ಹಲವು ವರ್ಷಗಳಿಂದ ವಂಚನೆಗೊಳಾದ ಮಹಿಳೆ ಮತ್ತು ಈತ ಇಬ್ಬರು ಗಂಡ ಹೆಂಡತಿಯಂತೆ ಒಂದೇ ಮನೆಯಲ್ಲಿ ವಾಸವಾಗಿದ್ದರು. ಇನ್ನು ಮಹಿಳೆಗೆ ತವರು ಮನೆಯಿಂದ ಬಂದಿದ್ದ 10 ಲಕ್ಷ ರೂಪಾಯಿ ಹಾಗೂ ಒಡವೆಗಳನ್ನು ಈತ ಪಡೆದು ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ಸದ್ಯ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ ಮಹಿಳೆ.

ಮಹಿಳೆ ಮತ್ತು ಕುಟುಂಬಸ್ಥರು ವಂಚನೆ ಮಾಡಿದವನ ಮನೆ ಮುಂದೆ ಧರಣಿ ಮಾಡುತ್ತಿದ್ದಾರೆ. ಅಲ್ಲದೆ ನಂಬಿಸಿ ಎಲ್ಲ ರೀತಿಯಲ್ಲೂ ತನ್ನನ್ನು ಬಳಸಿಕೊಂಡು, ಮನೆ ಕಟ್ಟಿಕೊಡುವುದಾಗಿ ಹೇಳಿ ಇದೀಗ ಬೀದಿಗೆ ತಳ್ಳಿದ್ದಾ‌ನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನು ತಮಟೆ ಹೊಡೆಯುವ ಮೂಲಕ ಮಹಿಳೆ ಕುಟುಂಬಸ್ಥರು ವಂಚಕನ ಮನೆ ಮುಂದೆ ಧರಣಿ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ವಂಚನೆ ಮಾಡಿದ ಪುರುಷೊತ್ತಮನ ವಿರುದ್ಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸದ್ಯ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ