NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌: ಹೊರಬಿದ್ದ ಸರ್ಕಾರದ ಅಧಿಕೃತ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ವಿತರಣೆ ಮಾಡಲು ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳಿಗೂ ಸರ್ಕಾರ ಇಂದು ಆದೇಶ ಮಾಡಿದೆ.

ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ವಿಸ್ತರಿಸುವ ಬಗ್ಗೆ ನಿನ್ನೆ ತಿಳಿಸಿತ್ತು.

ರಾಜ್ಯದ ಶಾಲಾ- ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಜೂನ್‌ 3ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಈ ಆದೇಶಿಸ ಮಾಡಲಾಗಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

ಈ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದ್ದಾರೆ.

ಈ ಯೋಜನೆಯ ಅನುಷ್ಠಾನದ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ಸಚಿವ ಸಂಪುಟ ಪ್ರಕರಣ ಸಂಖ್ಯೆ:ಸಿ.310/2026, ದಿನಾಂಕ:03.06.2026ರನ್ವಯ ಹೊರಡಿಸಲಾಗಿದೆ ಎಂದು ಪುಷ್ಪ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌: ಹೊರಬಿದ್ದ ಸರ್ಕಾರದ ಅಧಿಕೃತ ಆದೇಶ ಕೊಟ್ಟ ಮಾತು ತಪ್ಪಿದ ಸಿಎಂ ಡಿಕೆಶಿ: ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ! ಸರ್ಕಾರದ 2 ಸಾವಿರ ರೂ. ಪಡೆಯಲು ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್‌ ಕಡ್ಡಾಯ ಡ್ಯೂಟಿ ರೋಟಾ ಸಂಬಂಧ  ಜೂನ್‌ 20ರಿಂದ ಸಾರಿಗೆ ನೌಕರರ ಕೌನ್ಸೆಲಿಂಗ್: ಸಿಟಿಎಂ ಆದೇಶ ಹೃದಯಾಘಾತದಿಂದ ಪಾರಾಗಲು ನಿಮಗೆ ಬಾದಾಮಿ ಅಥವಾ ಬಡವರ ಬಾದಾಮಿ ಕಡಲೆಕಾಯಿ ಯಾವುದು ಹಿತ? ಮಾವು, ಹಲಸು ಪ್ರಿಯರಿಗೆ ಸಿಹಿಸುದ್ದಿ: ಜೂ.5 ರಿಂದ 7ರವರೆಗೆ ಮಾವು, ಹಲಸು ಹಣ್ಣುಗಳ ಪ್ರದರ್ಶನ ಮಾರಾಟ ಮೇಳ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದತಿಗೆ ಮುಂದಾಗಿ: ನೂತನ ಸಿಎಂಗೆ ಕುರುಬೂರು ಶಾಂತಕುಮಾರ್ ಒತ್ತಾಯ ಶಾಲೆ- ಕಾಲೇಜು ಹುಡುಗರಿಗೆ ಫ್ರೀ ಬಸ್ : ನೂತನ ಸಿಎಂ ಡಿಕೆಶಿ ಘೋಷಣೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ-ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವ...