NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಜೂನ್‌ 11ರಿಂದ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿಗಳನ್ನು ಕೊಡುವುದಕ್ಕೆ ಇಂದು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಇದೇ ಜೂನ್‌ 11ರಿಂದ ರಾಜ್ಯದ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸರ್ಕಾರಿ ಬಸ್​​ನಲ್ಲಿ ಫ್ರೀಯಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ, ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸುತ್ತಿದ್ದಂತೆ ಅಲ್ಲಿದ್ದ ಪತ್ರಕರ್ತರು ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಹಾಸ್ಯದ ಧಾಟಿಯಲ್ಲಿ ಉತ್ತರಿಸುತ್ತಾ, ‘ಹೌದು ಕಣಯ್ಯಾ, ನನ್ನ ಹೆಂಡ್ತಿಯೂ ಸರ್ಕಾರಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಜತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ (ವಂದಿತಾ ಶರ್ಮ) ಅವರಿಗೂ ಈ ಯೋಜನೆ ಸೌಲಭ್ಯ ಅನ್ವಯವಾಗುತ್ತದೆ’ ಎಂದರು.

ಮನೆ ಯಜಮಾನಿ ಖಾತೆಗೆ 2000 ರೂ. ಜಮೆ: ಇನ್ನು ಮನೆ ಯಜಮಾನಿ ಖಾತೆಗೆ 2000 ರೂ. ಜಮೆ ಮಾಡುತ್ತೇವೆ. ಆದರೆ ಇದಕ್ಕಾಗಿ ಅಕೌಂಟ್​ ನಂಬರ್, ಆಧಾರ್​ ನಂಬರ್​, ಅರ್ಜಿ ಮುಂತಾದವನ್ನು ನೀಡಬೇಕು. ನಂತರ ಇಲಾಖೆಯವರು ಈ ಮಾಹಿತಿಯನ್ನು ಪ್ರಾಸೆಸ್ ಮಾಡಿ ಆಗಸ್ಟ್​ 15ನೇ ತಾರೀಕಿನಿಂದ ಈ ಯೋಜನೆಯನ್ನು ಜಾರಿಗೆ ತರುತ್ತಾರೆ ಎಂದರು.

ಇನ್ನು ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯತ್ತಿರುವವರಿಗೂ ಈ ಭತ್ಯೆ ಸಿಗಲಿದೆ. ಈ ಯೋಜನೆ ಎಲ್ಲ ಬಿಪಿಎಲ್ ಹಾಗೂ ಎಪಿಎಲ್ ಮಹಿಳೆಯರಿಗೂ ಅನ್ವಯವಾಗಲಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಈ ಹಣ ಅತ್ತೆಗೆ ನೀಡುವುದೋ, ಸೊಸೆಗೆ ನೀಡುವುದೋ ಎಂಬ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, “ಈ ಯೋಜನೆಯ ಫಲಾನುಭವಿಗಳಾಗಲು ಜನರು ಬ್ಯಾಂಕ್ ಅಕೌಂಟ್ ದಾಖಲೆ, ಆಧಾರ್ ಕಾರ್ಡ್ ಕೊಡಬೇಕು. ಆಗಲೇ ಮನೆ ಯಜಮಾನಿ ಖಾತೆಗೆ ಎರಡು ಸಾವಿರ ಜಮಾ ಆಗುತ್ತೆ.

ಇನ್ನು ಈ ಹಣ ಅತ್ತೆಗೆ ತಲುಪುತ್ತದೋ ಸೊಸೆಗೆ ತಲುಪುತ್ತದೋ ಎನ್ನುವ ವಿಚಾರ, ಮನೆಯವರಿಗೇ ಬಿಟ್ಟಿದ್ದು. ಯಾರು ಮನೆಯ ಯಜಮಾನಿ ಎಂಬ ವಿಚಾರದ ಮಾಹಿತಿಯನ್ನು ಕುಟುಂಬದವರೇ ನೀಡಬೇಕು. ಕುಟುಂಬದವರು ಕೊಟ್ಟ ಮಾಹಿತಿ ಆಧಾರದ ಮೇಲೆ ಫಲಾನುಭವಿ ಯಾರು ಎನ್ನುವುದು ನಿರ್ಧಾರ ಆಗುತ್ತದೆ ಎಂದು ಹೇಳಿದರು.

ಯುವ ನಿಧಿ 24 ತಿಂಗಳ ತನಕ ನೀಡುತ್ತೇವೆ: ಯುವ ನಿಧಿ ಅಡಿಯಲ್ಲಿ 24 ತಿಂಗಳ ತನಕ ಪದವೀಧರರಿಗೆ ಹಾಗೂ ಡಿಪ್ಲೊಮಾ ಮಾಸಿಕ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ.

ಯುವ ನಿಧಿ- 2023-24ರಲ್ಲಿ ತೇರ್ಗಡೆಯಾದವರಿಗೆ 24 ತಿಂಗಳ ತನಕ ಮಾಸಿಕ 3,000 ರೂ., ಡಿಪ್ಲೊಮಾ 1,500 ರೂ ಮಾಸಿಕ ಭತ್ಯೆ. ಇದೇ ಅವಧಿಯಲ್ಲಿ ಯಾರಿಗಾದರೂ ಸರ್ಕಾರಿ ಅಥವಾ ಖಾಸಗಿ ನೌಕರಿ ಸಿಕ್ಕರೆ ಭತ್ಯೆ ಸಿಗುವುದಿಲ್ಲ” ಎಂದು ಘೋಷಿಸಿದರು.

10 ಕೆಜಿ ಅಕ್ಕಿ: ಬಿಪಿಎಲ್‌ ಕಾರ್ಡ್‌ ಇರುವ ಪ್ರತಿಯೊಬ್ಬರಿಗೂ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ