ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ X ಮಾಡಿರುವ ಅವರು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ ಎಂದು ತಿಳಿಸುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಈ ಮಹತ್ವದ ಘೋಷಣೆಯನ್ನು ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದ ದೂರದ ಪಟ್ಟಣ, ನಗರಗಳಲ್ಲಿರುವ ಶಾಲಾ- ಕಾಲೇಜುಗಳಿಗೆ ಹೋಗಿ ಕಲಿಯುವುದಕ್ಕೆ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಕುಟುಂಬಗಳ ಸಾವಿರಾರು ಮಕ್ಕಳಿಗೆ ವರದಾನವಾಗಿದೆ.
ಹೀಗಾಗಿ ಸರ್ಕಾರದ ಈ ನಡೆಯನ್ನೂ ಹಾಗೂ ರಾಜ್ಯದಲ್ಲಿರುವ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡುತ್ತಿರುವ ಪರಿಯನ್ನು ಪ್ರಜ್ಞಾವಂತ ನಾಗರಿಕರು ಮುಕ್ತ ಕಂಠದಿಂದ ಹೊಗಳುತ್ತಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಅದರಂತೆ, ಸಾರ್ವಜನಿಕ ಸೇವಕರಾಗಿ ಹಗಲಿರುಳೆನ್ನದೆ ಡ್ಯೂಟಿ ಮಾಡುತ್ತಿರುವ ಸಾಋಿಗೆ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ಕೊಡಬೇಕು ಎಂದು ಸಾರಿಗೆ ನೌಕರರು ಒತ್ತಾಯಿಸಿದ್ದಾರೆ.
ಜತೆಗೆ 202ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಹೆಚ್ಚಳವಾಗಬೇಕಿರುವ ವೇತನವನ್ನು 7ನೇ ವೇತನ ಆಯೋಗದಂತೆ ಕೊಡಬೇಕು ಎಂಬ ಆಗ್ರಹವನ್ನು ಸಾರಿಗೆ ನಿಗಮಗಳ ಅಧಿಕಾರಿಗಳು ಹಾಗೂ ನೌಕರರು ಮಾಡಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ!
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.#KarnatakaPublicSchool pic.twitter.com/tnvwFFEMij
— DK Shivakumar (@DKShivakumar) July 11, 2025
Related
