NEWS

ಮೇ 15 ರಿಂದ ಉಚಿತ ಎಂಬ್ರಾಯ್ಡರಿ & ಆರಿ ವರ್ಕ್ ತರಬೇತಿ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್‌ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 15 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ಕಾರ್ಡ್‌ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ 8 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ತಿಳಿಸಿದ್ದಾರೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?