NEWSನಮ್ಮಜಿಲ್ಲೆಸಂಸ್ಕೃತಿ

ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನಗರದ ಶಾಂತಿನಗರ ಬಡಾವಣೆಯಲ್ಲಿ ಗಣೇಶ ಮಂಡಳಿ ವತಿಯಿಂದ ಪ್ರತಿಷ್ಠಾಪನೆ ಮಾಡಿದ ಶ್ರೀ ಗಣೇಶ ಮೂರ್ತಿ ವಿಸರ್ಜನೆ ಮುನ್ನಾ ದಿನವಾದ ಇಂದು ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆ ಹಾಗೂ ಗಣೇಶ ಮಂಡಳಿ ಜಂಟಿ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ನೇತ್ರ ತಪಾಸಣೆ ಶಿಬಿರ ಜರುಗಿತು.

ಸಮಾರಂಭದಲ್ಲಿ ಮಾತನಾಡಿದ ಮಹಾ ನಗರ ಪಾಲಿಕೆ ಸದಸ್ಯ ಹಾಗೂ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಚಿನ್‌ ಶಿರವಾಳ, ನಮ್ಮ ಬಡಾವಣೆಯಲ್ಲಿ ಕಳೆದ ಮೂರು ವರ್ಷಗಳಿಂದ ವಿಘ್ನ ವಿನಾಯಕ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಜತೆಗೆ ಸಮಾಜದ ಕಡು ಬಡವರಿಗೆ ಉಚಿತ ಅರೋಗ್ಯ ಮತ್ತು ನೇತ್ರ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಬಡಾವಣೆಯ ಯುವಕರು ಹಾಗೂ ಹಿರಿಯರ ಸಾಮಾಜಿಕ ಜವಾಬ್ದಾರಿ ಅತ್ಯಂತ ಶ್ಲಾಘನೀಯ ಕೆಲಸ ಎಂದು ಹೇಳಿದರು.

ಕಳೆದ ನಾಲ್ಕು ದಿನಗಳಿಂದ ಬಡಾವಣೆಯ ರಸ್ತೆ ಬದಿಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಬಡಾವಣೆ ಸ್ವಚ್ಛತೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಮಾಜಿಕ ಜವಾಬ್ದಾರಿ ತೋರಿದ ಸರ್ವರಿಗೂ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸಿದರು.

ಶಾಂತಿನಗರ ಬಡಾವಣೆ ನಾಗರಿಕರಾದ ಶರಣಬಸಪ್ಪ ಬೆಳಕೇರಿ, ಅಮೃತ ಬಿರಾದಾರ, ಬಾನುಕುಮಾರ ಗಿರೆಗೋಳ, ವೈಜನಾಥ ಭಾವಿ, ನಾಗರಾಜ ವಡ್ಡಳ್ಳಿ, ಮಹೇಶ ಮಠ, ಶಿವಾನಂದ ಬಿರಾದಾರ, ರಾಜಶೇಖರ ಕಕ್ಕಳಮೇಲಿ, ಭೀಮರೆಡ್ಡಿ ಪಾಸೋಡಿ, ಮಲ್ಲಿಕಾರ್ಜುನ ಬಿರಾದಾರ, ರಾಘವೇಂದ್ರ ಚಿಂಚನಸೂರ, ನಾಗೇಂದ್ರ ಹಡಪಾದ, ಅಂಕೂಶ ದಬಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...