NEWSಆರೋಗ್ಯನಮ್ಮಜಿಲ್ಲೆನಮ್ಮರಾಜ್ಯ

ಜೂ.12ರಿಂದ 200 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ: ಡಾ.ಸಿ.ಎನ್‌.ಮಂಜುನಾಥ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 200 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡುವುದಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸ೦ಸ್ಥೆಯಲ್ಲಿ ಉಚಿತ ಆ೦ಜಿಯೋಪ್ಲಾಸ್ಟಿ ಕಾರ್ಯಾಗಾರ ಆಯೋಜನೆ ಮಾಡಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೆಡ್ಯಾನಿಕ್ಸ್‌, ಅಮೆರಿಕ  ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ಏಷ್ಯನ್ ಚನ್, ಅಮೆರಿಕ ಅವರ ಸಹಯೋಗದೊಂದಿಗೆ 200 ರೋಗಿಗಳಿಗೆ, ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಜೂನ್ 12ರಿಂದ ಜೂನ್ 18ರವರೆಗೆ ಜಯದೇವ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ

ಇನ್ನು ಕಾರ್ಯಾಗಾರವು ಜಯದೇವ ಆಸ್ಪತ್ರೆ, ಬೆಂಗಳೂರು (ಕೇಂದ್ರ ಕಚೇರಿ) ಜೂನ್‌ 12-14ರವರೆಗೆ, ಜಯದೇವ ಆಸ್ಪತ್ರೆ, ಮೈಸೂರು ಶಾಖೆಯಲ್ಲಿ ಜೂನ್‌ 15-16ರವರೆಗೆ ಹಾಗೂ ಜಯದೇವ ಆಸ್ಪತ್ರೆ, ಕಲಬುರಗಿ ಶಾಖೆಯಲ್ಲಿ ಜೂನ್‌ 17-18ರವರೆಗೆ ಆಯೋಜನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಸಿ.ಎಸ್.ಮಂಜುನಾಥ್‌ ಅವರ ಪ್ರಕಾರ ಈ ಕಾರ್ಯಾಗಾರದಲ್ಲಿ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ. ಅವಶ್ಯಕ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಬಡತನ ರೇಖೆಗಿಂತ ಕೆಳಗಿರುವ ರೋಗಿಗಳು ಮತ್ತು ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಹಾಯಕ ರೋಗಿಗಳು ತಮ್ಮ ಹೆಸರನ್ನು 8ನೇ ಜೂನ್ ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಸಮಯ : ಬೆಳಗ್ಗೆ 10 ಗಂಟೆಯಿಂದ ಸಂಜೆ 4 ವರೆಗೆ, ದಾಖಲಾತಿಗಾಗಿ ಸ೦ಪರ್ಕಿಸಿ ಎಂದು ತಿಳಿಸಿದ್ದಾರೆ.

ಮಾಹಿತಿಗೆ ನಿರ್ದೇಶಕರ ಕಚೇರಿ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಬೆಂಗಳೂರು – 560 069, ಬೆಂಗಳೂರು ಕಚೇರಿ ದೂರವಾಣಿ ಸಂಖ್ಯೆ: 9480827888 ಅಥವಾ 080-26944874, ಮೈಸೂರು ಕಚೇರಿ ದೂರವಾಣಿ ಸಂಖ್ಯೆ : 8660105492 -0821-2263255. ಕಲಬುರಗಿ ಕಚೇರಿ ದೂರವಾಣಿ ಸಂಖ್ಯೆ : 9482114611 08472-230511 ಸಂಪರ್ಕಿಸಿ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?