NEWSಉದ್ಯೋಗಕೃಷಿನಮ್ಮಜಿಲ್ಲೆ

ಮೇಕೆ ಸಾಕಾಣಿಕೆಗಾಗಿ ಉಚಿತ ತರಬೇತಿ: 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೇಕೆ/ ಆಡು ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿ ಇದೇ ಫೆ.12 ರಿಂದ 21 ರವರೆಗೆ 10 ದಿನಗಳ ಕಾಲ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತ ತರಬೇತಿಗೆ ಆಸಕ್ತ 18 ರಿಂದ 45 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವವರು ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 8884554510, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್‌ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ