NEWS

ಸರ್ಕಾರಿ ಬಸ್‌ಗಳಲ್ಲಿ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಮಹಿಳೆಯರು ಇನ್ನು ಮುಂದೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ  ತಿಳಿಸಿದ್ದಾರೆ.

ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ ಸಂಬಂಧ ಮಂಗಳವಾರ (ಮೇ 30) ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ  ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ಸಭೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದರು.

ಆದರೆ ಈ ಬಗ್ಗೆ ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದರು.

4 ನಿಗಮಗಳ‌ ಎಂಡಿಗಳ ಜತೆ ಸಭೆ ಮಾಡಲಾಗಿದೆ. ಆರ್ಥಿಕ ಪರಿಸ್ಥಿತಿ ಕುರಿತ ಮಾಹಿತಿ ಲಭಿಸಿದೆ. ಕೋವಿಡ್ ಸಂದರ್ಭದಲ್ಲಿ ನಷ್ಟದ ಕುರಿತ ಮಾಹಿತಿ ಲಭಿಸಿದೆ. ನೇಮಕಾತಿ ಆಗದಿರುವುದು ಮತ್ತು ಬಸ್‌ಗಳ ಖರೀದಿ ಬಗ್ಗೆ ಚರ್ಚೆ ಆಗಿದೆ. ಇಡೀ ದೇಶದಲ್ಲೇ ಒಳ್ಳೆಯ ಸಂಸ್ಥೆಗಳು ಇವು. 350 ರಿಂದ 400 ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿವೆ ಎಂದರು.

4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ. 1,04,650 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ. ಇನ್ನು ಎಂಡಿಗಳು ಇಂದು 3 ರಿಂದ 4 ಆಯ್ಕೆಗಳನ್ನು ತಿಳಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕೆ ಬರುವುದರಲ್ಲಿ ಸಂಶಯವೇ ಇಲ್ಲ ಎಂದು ಭರವಸೆ ನೀಡಿದರು.

ಸಾರಿಗೆ ನಿಗಮಗಳ ಎಂಡಿಗಳ ಜತೆ ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ ಎಂದ ಅವರು, ನಾಳೆ ಉಚಿತ ಪ್ರಯಾಣವನ್ನು ಸಿಎಂ ಫೈನಲ್ ಮಾಡ್ತಾರೆ. ಯಾವುದೇ ನಿರ್ಬಂಧವಿಲ್ಲದೇ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡುತ್ತೇವೆ. ಬಿಜೆಪಿಯವರ ಹತ್ತಿರ ನಾವು ಹೇಳಿಸಿಕೊಳ್ಳಬೇಕಿಲ್ಲ. ಅವರು ಪ್ರತಿಭಟನೆ ಮಾಡುವುದಕ್ಕೆ ಅವಕಾಶವೇ ನೀಡೋದಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...