NEWSನಮ್ಮಜಿಲ್ಲೆ

ಬಿಎಂಟಿಸಿಯಲ್ಲಿ ಮಾ.8ರಂದು ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ – ಮಾ.9ರಿಂದ 29ರವರೆಗೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೂ ಸೌಲಭ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಯರಿಗೆ ಸಿಹಿಸುದ್ದಿ ನೀಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಇದೇ ಮಾ.8ರ ಮಹಿಳಾ ದಿನಾಚರಣೆಯಂದು ಬಿಎಂಟಿಸಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಹೀಗಾಗಿ ಅಂದು ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಎಲ್ಲಿಗೆ ಪ್ರಯಾಣಿಸಿದರೂ ಹಣ ನೀಡುವ ಅಗತ್ಯವಿಲ್ಲ. ಮಹಿಳಾ ಪ್ರಯಾಣಿಕರನ್ನು ಉತ್ತೇಜಿಸುವ ಉದ್ದೇಶದಿಂದ ಬಿಎಂಟಿಸಿ ಈ ಪ್ಲಾನ್ ಮಾಡಿರುವುದಾಗಿ ತಿಳಿಸಿದೆ.

ಇನ್ನು ರಾಜಧಾನಿಯಲ್ಲಿ 40,86,580 ಮಹಿಳೆಯರಿದ್ದು, ಪ್ರತಿದಿನ 10,21,645 ಜನರು ಪ್ರಯಾಣ ಮಾಡುತ್ತಾರೆ. ಮಾರ್ಚ್ 8ರಂದು ಉಚಿತ ಪ್ರಯಾಣ ಹಿನ್ನೆಲೆ ಈ ಸಂಖ್ಯೆ ದುಪ್ಪಟ್ಟು ಆಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದು, ಈ ಉಚಿತ ಪ್ರಯಾಣದಿಂದ ಬಿಎಂಟಿಸಿಗೆ 8,17,31,600 ರೂಪಾಯಿ ಹೊರೆ ಆಗಲಿದೆ ಎಂದು ಅಂದಾಜಿಸಿದ್ದಾರೆ.

ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣ ಮಾಡುವುದರಿಂದ ಅವರಿಗೆ ಒಂದು ಸುವರ್ಣ ಅವಕಾಶ ಕಲ್ಪಿಸಿದಂತಾಗಿ ಇದರಿಂದ ಸರ್ಕಾರದ ಘನತೆ ಹೆಚ್ಚಾಗಲಿದೆ. ಜತೆಗೆ ಸಾರ್ವಜನಿಕ ಸಾರಿಗೆ ಉತ್ತೇಜಿಸಿದಂತಾಗಲಿದ್ದು, ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಎಂದರೆ ಬಿಎಂಟಿಸಿ ಮಾತ್ರ ಎಂಬ ಬಗ್ಗೆ ಇನ್ನಷ್ಟು ಅರಿವು ಮೂಡಿಸಿದಂತಾಗಲಿದೆಯಂತೆ.

ಇನ್ನು ಇದೇ ಮಾ. 9, 2023 ರಿಂದ ಮಾ. 29, 2023ರವರೆಗೆ ದ್ವಿತೀಯ ಪಿಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪ್ರಯಾಣದ ವೇಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪತ್ರವನ್ನು ಕಡ್ಡಾಯವಾಗಿ ತೋರಿಸಬೇಕು. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮಾತ್ರ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ ಎಂದು ತಿಳಿಸಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...