NEWSನಮ್ಮರಾಜ್ಯಶಿಕ್ಷಣ-

KSRTC 4 ನಿಗಮಗಳ ಬಸ್‌ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳು (KSRTC, BMTC, NWKRTC, KKRTC) ಸಿಹಿ ಸುದ್ದಿ ನೀಡಿವೆ.

ಮಾರ್ಚ್​ 1ರಿಂದ ಮಾರ್ಚ್​ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ದಿನದಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ತೆರಳಬಹುದಾಗಿ.

ಉಚಿತ ಪ್ರಯಾಣವನ್ನು ಬೆಳೆಸುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತಾವು ಸಂಚರಿಸುವ ಬಸ್‌ನ ನಿರ್ವಾಹಕರಿಗೆ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಸಾಮಾನ್ಯ ಸೇವೆ ನೀಡುವ ಬಸ್‌ನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರದವರೆಗೆ ಪ್ರಯಾಣಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ವಿದ್ಯಾರ್ಥಿ ಮತ್ತು ಪಾಲಕರ ಕೋರಿಕೆಯ ಮೇರೆಗೆ ಬಸ್​ಗಳನ್ನು ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಲಾಗುವುದು ಎಂದು ನಾಲ್ಕೂ ನಿಗಮಗಳ ಅಧಿಕಾರಿಗಳು ತಿಳಿಸಿದ್ದು, ನಿರ್ವಾಹಕರು ಈ ಬಗ್ಗೆ ಪ್ರಾಮಾಣಿಕತೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ವ್ಯವಸ್ಥೆ ಮಾಡುವ ಮೂಲಕ ಸರಿಯಾದ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ