ಬೆಂಗಳೂರು: ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರುರವರು ಹೊಸಪೇಟೆ, ಕೊಪ್ಪಳ, ಗದಗ, ಹರಿಹರ, ಕನಕಗಿರಿ, ದಾವಣಗೆರೆ ಹಾಗೂ ತುಮಕೂರಿಗೆ ಪ್ರವಾಸ ಹಮ್ಮಿಕೊಂಡಿದ್ದಾರೆ.
ಫೆಬ್ರವರಿ 24ರ ಶುಕ್ರವಾರದಂದು ಬೆಂಗಳೂರಿನಿಂದ ಹೊರಟು, ಫೆ.25ರ ಶನಿವಾರ ಬೆಳಗ್ಗೆ 9.30ಕ್ಕೆ ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಮಧ್ಯಾಹ್ನ 2 ಗಂಟೆಗೆ ಗದಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ನಂತರ ಶ್ರೀ ಪುಟ್ಟರಾಜ ಗವಾಯಿಗಳ ಮಠ ಹಾಗೂ ಶ್ರೀ ತೋಂಟದಾರ್ಯ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಹರಿಹರ ಹಾಗೂ ಕನಕಗಿರಿ ಪೀಠಕ್ಕೆ ಭೇಟಿ ನೀಡಲಾಗುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರು ಅವರು ಫೆಬ್ರವರಿ 26ರ ಭಾನುವಾರದಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11 ಗಂಟೆಗೆ ವಾಲ್ಮೀಕಿ ಸಮಾಜದ ನಾಯಕರೊಂದಿಗೆ ಸಭೆ ನಡೆಸಿ, ಮಧ್ಯಾಹ್ನ 3 ಗಂಟೆಗೆ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಮಾರ್ಚ್ 4ರಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದಾವಣಗೆರೆಗೆ ಆಗಮಿಸುತ್ತಿದ್ದು, ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದಿನ ಸಮಾವೇಶಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಮನವಿ ಮಾಡಿದೆ.