Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್

ವಿಜಯಪಥ ಸಮಗ್ರ ಸುದ್ದಿ
  • ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ

ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 4ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು ತಿಳಿಸಿದರು.

ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು 2024ರ ಅಕ್ಟೋಬರ್. 1 ರಿಂದ 2024ರ ಡಿಸೆಂಬರ್. 18 ವರೆಗೆ ಒಟ್ಟು 28 ಜನ ಸಂತ್ರಸ್ತರಿಗೆ ಒಟ್ಟು 8,75,000 ರೂ ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನವರಿ ಮಾಹೆಯಿಂದ ಇಲ್ಲಿಯವರೆಗೆ 48 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್ ಶೀಟ್ ಅನ್ನು ಕಾಲಾವಧಿಯಲ್ಲೇ ಸಲ್ಲಿಸುವ ಜತೆಗೆ ಯಾವುದೇ ಚಾರ್ಜ್ ಶೀಟ್ ಬಾಕಿ ಉಳಿಸಿಕೊಳ್ಳದಂತೆ ಪೋಲಿಸ್ ಅಧಿಕಾರಿಗಳು ಕ್ರಮ ವಹಿಸಿ ಎಂದು ಹೇಳಿದರು.

ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಗ್ರಾಮ/ ಹಳ್ಳಿಗಳನ್ನು ಗುರುತಿಸಿ ಸಂಬಂಧಪಟ್ಟ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ ಟಿ.ಎಲ್.ಎಸ್, ಡಿವೈಎಸ್ಪಿ ರವಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌