NEWSನಮ್ಮಜಿಲ್ಲೆನಮ್ಮರಾಜ್ಯ

ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನ ಆಚರಣೆಯಲ್ಲಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸಬೇಕು ಎಂದು ಹೇಳಿದರು.

ಇನ್ನು ಇಷ್ಟಕ್ಕೆ ಸೀಮಿತವಾಗದೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು. ಪ್ರತಿಯೊಬ್ಬರೂ ಸಾರ್ವಜನಿಕ ಶೌಚಾಲಯಗಳನ್ನು ನಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಯಲು ಶೌಚ್ಛ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಈ ವೇಳೆ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವನಹಳ್ಳಿ ತಾಪಂ ಇಒ ಶ್ರೀನಾಥಗೌಡ ಅವರು
ಶೌಚಾಲಯ ಬಳಕೆ ಹಾಗೂ ನೈರ್ಮಲ್ಯ ಕಾಪಾಡುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲಕುಮಾರ, ಕುಂದಾಣ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

Leave a Reply

error: Content is protected !!
LATEST
ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ತುಷಾರ್ ಗಿರಿನಾಥ್ ನಲ್‌ಜಲ್ ಮಿತ್ರ ತರಬೇತಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನುರಾಧ ಚಾಲನೆ ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ BMTC ಘಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಾಲಕನ ಕುಟುಂಬ ಪರನಿಂತ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈ ಕೋರ್ಟ್‌ ... KKRTC: ತಡರಾತ್ರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೋರಿದ 15ಕ್ಕೂ ಹೆಚ್ಚು ದರೋಡೆಕೋರರು- ತಪ್ಪಿದ ಭಾರಿ ಅನಾಹುತ! KSRTC: ವೇತನ ಹೆಚ್ಚಳ ಸಂಬಂಧ ಗೌಪ್ಯ ಸಭೆಗೆ ಸಜ್ಜಾದ ಅಧಿಕಾರಿಗಳು-ಸಿಬ್ಬಂದಿ ವರ್ಗ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಮುನಿಯಪ್ಪ ಬಸ್‌ ಪಾಸ್‌ ತೋರಿಸದೆ ನಿರ್ವಾಹಕರಿಗೆ ಅವಾಜ್‌ ಹಾಕಿ ಬಸ್‌ ನಿಲ್ಲಿಸಿ ಗಲಾಟೆ ಮಾಡಿದ ಕಿರಾತಕ ! 2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌