NEWSನಮ್ಮರಾಜ್ಯ

ಸಾರಿಗೆ ನೌಕರರ ನಾಳಿನ ಪ್ರತಿಭಟನೆಗೆ ಸಂಪೂರ್ಣ ಬೆಂಬಲ: EPS-95,BMTC KSRTC ನಿನೌ ಸಂಘದ ಅಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನಗಳ ಜಂಟಿ ಕ್ರಿಯಾ ಸಮಿತಿ ನಾಳೆ ಅಂದರೆ ಇದೇ ಜ.29ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಗೆ ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ನಂಜುಂಡೇಗೌಡ ಅವರು, ಸಾರಿಗೆ ಸಂಸ್ಥೆಯ ನೌಕರರಿಗೆ (ನಿವೃತ್ತಿ ನೌಕರರು ಸೇರಿ) ನೀಡಬೇಕಾದ 38 ತಿಂಗಳ ವೇತನ ಪರಿಷ್ಕರಣಾ ಬಾಗಿ ಹಾಗೂ ಜನವರಿ 01, 2024 ರಿಂದ ಅನ್ವಯವಾಗುವಂತೆ ಕೈಗಾರಿಕಾ ಒಪ್ಪಂದವನ್ನು ರಾಜ್ಯ ಸರ್ಕಾರ ಕಾರ್ಮಿಕ ಮುಖಂಡರ ಜತೆ ಚರ್ಚಿಸಿ, ಕೂಡಲೇ ಜಾರಿ ಮಾಡಬೇಕು ಎಂದು ಅಗ್ರಹಿಸಿ ಜಿಂಟಿ ಕ್ರಿಯಾ ಸಮಿತಿ ನೀಡಿರುವ ಕರೆಗೆ ನಾವು ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರತಿಭಟನೆಗೆ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ನಾವು ಇದೇ ಜನವರಿ 13ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ನಾಲ್ಕೂ ಸಾರಿಗೆ ನಿವೃತ್ತ ನೌಕರರ ಹಿತ ರಕ್ಷಣಾ ವೇದಿಕೆ ಬೃಹತ್ ಸಮಾವೇಶವನ್ನು ನಡೆಸಿದ್ದು, ಇದು ಸಹ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಿದೆ ಎಂದು ಹೇಳಿದ್ದಾರೆ.

ಇತ್ತ ಸಂಸ್ಥೆಯ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತುಂಗಕ್ಕೆರಿಸಿದ ತನ್ನ ನೌಕರರನ್ನು ರಾಜ್ಯ ಸರ್ಕಾರ ಇದುವರೆಗೂ ನಡೆಸಿಕೊಂಡು ರೀತಿ ಸಮರ್ಥನೀಯವಲ್ಲ. ಕಾನೂನಾತ್ಮಕವಾಗಿ ನಾಲ್ಕು ವರ್ಷಗಳಿಗೊಮ್ಮೆ ನಡೆಯಬೇಕಾಗಿದ್ದ ಕೈಗಾರಿಕಾ ಒಪ್ಪಂದವನ್ನು ಮುಂದೂಡುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಅವರು, ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಸಾರ್ವಜನಿಕ ಪ್ರಯಾಣಿಕರ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಕಾರ್ಮಿಕ ಮುಖಂಡರನ್ನು ಕೂಡಲೇ ಚರ್ಚೆಗೆ ಆಹ್ವಾನಿಸಿ, ಬಾಕಿ ಇರುವ ಎಲ್ಲ ವಿವಿಧ ಬೇಡಿಕೆಗಳನ್ನು ನ್ಯಾಯಯುತವಾಗಿ ಒಡಂಬಡಿಕೆ ಮೂಲಕ ಇತ್ಯಾರ್ಥ ಪಡಿಸಬೇಕು ಎಂದು ಸಂಸ್ಥೆಯ ನಿವೃತ್ತ ನೌಕರರಾದ ನಾವೆಲ್ಲರೂ ಒಕ್ಕೂರೀಲಿನಿಂದ ಒತ್ತಾಯಿಸುತ್ತೇವೆ ಎಂದ್ದಿದ್ದಾರೆ.

ಹಾಲಿ ಸೇವೆಯಲ್ಲಿರುವ ನೌಕರರು ನಾಳಿನ ಪ್ರತಿಭಟನೆಯಲ್ಲಿ ಭಾಗವಹಿಸಿದಲ್ಲಿ, ಅಂತಹ ನೌಕರರು ಶಿಸ್ತು ಪಾಲನ ಕ್ರಮಕ್ಕೆ ಒಳಗಾಗಿ, ವೇತನ ಕಡಿತ ಶಿಕ್ಷೆ ಜಾರಿ ಮಾಡುವುದಾಗಿ, ಸಂಸ್ಥೆಯು ಎಚ್ಚರಿಕೆ ನೀಡಿದೆ. ಆದರೆ ಇಂತಹ ನಿಬಂಧನೆ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಅನ್ವಯಿಸದು. ಶಕ್ತಿ ಪ್ರದರ್ಶನಕ್ಕೆ ಸಿದ್ದ ಎಂಬ ಸಂದೇಶ ನೀಡಬೇಕಾಗಿದೆ ಎಂದು ಕರೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!