NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಸಂಘಟನೆಗಳ ಒಕ್ಕೂಟ ಇದೇ ಏ.8ರಿಂದ ಹಮ್ಮಿಕೊಂಡಿರುವ ಚಿತ್ರದುರ್ಗದಿಂದ- ಬೆಂಗಳೂರು ವರೆಗಿನ ಪಾದಯಾತ್ರೆಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಾಗಲಕೋಟೆ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ತಿಳಿಸಿದ್ದಾರೆ.

ಶುಕ್ರವಾರ (ನಿನ್ನೆ) ನಡೆದ ಮಹಾ ಮಂಡಳದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು ನಮ್ಮ ಬೆಂಬಲವನ್ನು ಈ ಹೋರಾಟಕ್ಕೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಯ ಒಕ್ಕೂಟದವರು ಇದೇ ಏ.21ರಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು, ಸಾರಿಗೆ ನೌಕರರಿಗೆ ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಬೇಡಿಕೆ, ಇಟ್ಟಿದ್ದಾರೆ.

ಅದೇ ರೀತಿ 01-01-2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ಮತ್ತು ಇತರೆ ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೇ ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಘೋಷಿಸುವಂತೆ ಬೇಡಿಕೆ ಇಟ್ಟಿದ್ದಾರೆ. 2020-21 ರ ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ ಹೊರಡಿಸಿರುವ ಶಿಕ್ಷಾದೇಶಗಳನ್ನು ರದ್ದು ಪಡಿಸುವಂತೆ ಕೋರಿದ್ದಾರೆ. ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರೆ ಕೊಟ್ಟಿರುವ ಉಪವಾಸ ಸತ್ಯಾಗ್ರಹ ಹಾಗೂ ಈ ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳವು ಸಂಪೂರ್ಣ ಬೆಂಬಲವನ್ನು ವ್ಯಕ್ತ ಪಡಿಸುತ್ತದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!