CrimeNEWS

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಐವರ ಬಂಧನ..!

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಡ್ರಾಪ್ ಕೇಳಿದ ಬಾಲಕಿಯೊಬ್ಬಳ್ಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಐವರು ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ (ಜು.10) ಈ ಘಟನೆ ಜರುಗಿದ್ದು, ಮತ್ತೋರ್ವ ಬಾಲಕಿ‌ ಮೇಲೂ ಅತ್ಯಾಚಾರಕ್ಕೆ ಯತ್ನಿಸಿದ್ದರು ಈ ಆರೋಪಿಗಳು ಎಂದು ತಿಳಿದು ಬಂದಿದೆ.

ಜೂನ್ 9 ರಂದು ಮೂವರು ಸ್ನೇಹಿತರ ಜತೆ ರಸ್ತೆಯಲ್ಲಿ ಬಾಲಕಿಯರು ನಡೆದು ಹೋಗುತ್ತಿದ್ದರು. ಈ ವೇಳೆ ದಾರಿಯಲ್ಲಿ‌ ಬಂದ ಅಪರಿಚಿತ ಕಾರನ್ನು ಹತ್ತಿ ನಾಗರಹೊಳೆಗೆ ಡ್ರಾಪ್‌ ನೀಡುವಂತೆ ವಿನಂತಿಸಿದ್ದರು ಎನ್ನಲಾಗಿದೆ.

ಇನ್ನು ಮಾರುತಿ 800 ಕಾರಿನಲ್ಲಿ ನಾಗರಹೊಳೆ‌ ಕಡೆ ಬಾಲಕಿಯರು ತೆರಳಿದ್ದು, ಈ ನಡುವೆ ದಾರಿ‌ ಮಧ್ಯೆ ಕಾಫಿ ತೋಟವೊಂದಕ್ಕೆ ಒಬ್ಬ ಬಾಲಕಿಯನ್ನು ಕರೆದುಕೊಂಡು ಹೋಗಿ ಆಕೆ ಮೇಲೆ ನವೀಂದ್ರ, ಅಕ್ಷಯ್​ ಎಂಬುವವರು ಅತ್ಯಾಚಾರ ಎಸಗಿದ್ದಾರೆ.

ಅಲ್ಲದೆ ಮತ್ತೋರ್ವ ಬಾಲಕಿ‌ ಮೇಲೆ ರಾಹುಲ್, ಮನು, ಸಂದೀಪ್​​ ಎಂಬುವವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಜಾಗೃತರಾದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನಾ‌ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದ್ದು, ಆತ್ಯಾಚಾರಿಗಳ ಹೆಡೆಮುರಿಕಟ್ಟಲು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನು ಈ ಅತ್ಯಾಚಾರಿ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸತ್ಯ ಎಂದಾದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರ ರೀತಿ ಬುಲ್ಡೇಜರ್‌ನಿಂದ ಅತ್ಯಾಚಾರಿಗಳ ಮನೆಗಳನ್ನು ನೆಲಸಮ ಮಾಡಬೇಕು ಎಂಬ ಆಕ್ರೋಶ ಎಲ್ಲೆಡೆ ಕೇಳಿ ಬರುತ್ತಿದೆ.

Leave a Reply

error: Content is protected !!
LATEST
KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ